ಬೆಂಗಳೂರು, ಜೂ. ೨೦: ಕೊಡಗು ಮಾನವ - ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನ ನಿಧಿ ಮಂಡಳಿಯ ೬ನೇ ಸಭೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.