ಮಡಿಕೇರಿ, ಜೂ. ೨೦: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರನ್ನು ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಸನ್ಮಾನಿಸಿತು. ಮೈಸೂರಿನ ಕುವೆಂಪು ನಗರದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ನೇತೃತ್ವದ ನಿಯೋಗಕ್ಕೆ ಕೊಡಗು ಜಿಲ್ಲೆಯ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಯದುವೀರ್ ಒಡೆಯರ್ ಭರವಸೆ ನೀಡಿದರು.

ಅಪ್ರು ರವೀಂದ್ರ ಮಾತನಾಡಿ ನೂತನ ಸಂಸದರಿAದ ಕೊಡಗಿನ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ ಎಂದರು.

ಹಿAದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಪೂಜಾರಿ, ರಘು ಶನಿವಾರಸಂತೆ, ಉಪಾಧ್ಯಕ್ಷರುಗಳಾದ ತಿಮ್ಮಪ್ಪ, ರಾಜ ಚಂದ್ರಶೇಖರ್, ಗಂಗಾಧರ್, ಕೋಲೆಯಂಡ ಗಿರೀಶ್, ಕಾರ್ಯಾಕಾರಿಣಿ ಸದಸ್ಯರುಗಳಾದ ಉಮಾ ಪ್ರಭು, ನಳಿನಿ, ಭವ್ಯಶ್ರಿ, ಸರಸ್ವತಿ, ಸುಧೀಶ್, ವೀರಾಜಪೇಟೆ ತಾಲೂಕು ಅಧ್ಯಕ್ಷ ನವೀನ್ ಉತ್ತಯ್ಯ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸುನೀಲ್, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ಪ್ರತೀಪ್ ಹಾಗೂ ಮಂಡಲ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.