ಮಡಿಕೇರಿ, ಜೂ. ೨೦: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಮೈಸೂರು ಹಾಗೂ ಮೈಸೂರು ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ., ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕರು ಗಳಿಗಾಗಿ ವಿಷಯಾಧಾರಿತ ತರಬೇತಿಯನ್ನು ತಾ.೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿ ಕೊಡವ ಸಮಾಜ ಕಟ್ಟಡದಲ್ಲಿರುವ ಹೋಟೆಲ್ ದಿ ಫೋರ್ಟ್ ಮರ್ಕರಾದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿ., ಬೆಂಗಳೂರು, ಇದರ ಅಧ್ಯಕ್ಷ ಜಿ.ನಂಜನಗೌಡ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷೆತಯನ್ನು ಇದರ ನಿರ್ದೇಶಕ ಮಂಜುನಾಥ್ ಎಸ್.ಕೆ ಅವರು ನೆರವೇರಿಸಿಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ಪೊನ್ನಂಪೇಟೆ ಇಗ್ಗುತ್ತಪ್ಪ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ನಿರ್ದೇಶಕ ಎಂ.ಕೆ ಸೋಮಯ್ಯ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಎಸ್.ಆರ್ ನಾರಾಯಣ ರಾವ್ ಹಾಗೂ ಸಹಕಾರ ಸಂಘಗಳ ಹಿರಿಯ ಲೆಕ್ಕಪರಿಶೋಧಕ (ನಿವೃತ್ತ) ಸಿರಿಲ್ ಮೊರಾಸ್ ಅವರು ಭಾಗವಹಿಸಲಿದ್ದಾರೆ.