ಮಡಿಕೇರಿ, ಜೂ. ೨೧ : ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ೨೦೨೪-೨೫ ನೆ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ತಾ.೨೨ ರಂದು (ಇಂದು) ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪ.ಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು ಸಿ. ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ಭಾಗವಹಿಸಲಿದ್ದಾರೆ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷೆ ದೇವಕಿ ಪಿ.ಎಂ, ಕಾರ್ಯದರ್ಶಿ ಎನ್.ಕೆ ಜ್ಯೋತಿ, ಖಜಾಂಚಿ ಅಂತೋಣಿ ವಿವಿಯನ್ ಆಳ್ವರೀಸ್ ಅವರು ಉಪಸ್ಥಿತರಿರಲಿದ್ದಾರೆ.