ವೀರಾಜಪೇಟೆ, ಜೂ. ೨೧: ವಿದ್ಯಾರ್ಥಿಗಳು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬಹುದು ಎಂದು ಕಾವೇರಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪ್ರೊ. ಇಟ್ಟೀರ ಬಿದ್ದಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ಕಾವೇರಿ ಪದವಿ ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾವೇರಿ ಪ್ರತಿಮೆಗೆ ಪುಷ್ಪಾರ್ಚನೆಗೈದು ಸಭಾ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಂದು ಸಮಾಜವು ಅವನತಿಯತ್ತಸಾಗುತ್ತಿದೆ. ಸಮಾಜದ ಬದಲಾವಣೆಗೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು. ಮುಖ್ಯ ಅತಿಥಿಯಾಗಿದ್ದ ಸಾಹಿತಿ ರಜಿತಾ ಕಾರ್ಯಪ್ಪ ಸಮಾಜದಲ್ಲಿ ವಿವಿಧ ಬಗೆಯ ಸೈಬರ್ ಕ್ರೆöÊಮ್ಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬೀಳದೆ ನಿರ್ದಿಷ್ಟ ಗುರಿಯೊಂದಿಗೆ ಸಾಧನೆ ಮಾಡಬೇಕೆಂದರು.
ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಬೆನಡಿಕ್ಟ್ ಸಾಲ್ಡಾನ ಅವರು ೨೦೨೩-೨೪ನೇ ಸಾಲೀನ ವಾರ್ಷಿಕ ವರದಿಯನ್ನು ವಾಚಿಸಿದರು. ವೇದಿಕೆಯಲ್ಲಿ ಶೈಕ್ಷಣಿಕ ಮತ್ತು ಕ್ರೀಡೆ ಹಾಗೂ ಸಾಂಸ್ಕೃತಿಕ, ಎನ್.ಎಸ್.ಎಸ್. ಎನ್ಸಿಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ನಂತರ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾವೇರಿ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ದಿಕ್ಷೀತ್ ಪೊನ್ನಮ್ಮ, ನಾಯಕ ಧನೀಶ್ ಪೊನ್ನಣ್ಣ ಮತ್ತು ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾವೇರಿ ವಿದ್ಯಾಸಂಸ್ಥೆಗಳ ನಿರ್ದೇಶಕರುಗಳಾದ ಮೊಣ್ಣಪ್ಪ, ಸುಭಾಷ್ ಸುಬ್ಬಯ್ಯ, ಬೆಳ್ಯಪ್ಪ, ಕೋಶಾಧಿಕಾರಿಗಳಾದ ಸಿ.ಡಿ. ಮಾದಪ್ಪ, ಮಾಜಿ ಪ್ರಾಂಶುಪಾಲರಾದ ಕಮಲಾಕ್ಷಿ ಬಿದ್ದಪ್ಪ ಮತ್ತು ಡಾ. ಆನಂದ್ ಕಾರ್ಲ. ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಎA. ನಾಣಯ್ಯ, ಪದವಿ ಮತ್ತು ಪದವಿಪೂರ್ವ ಕಾಲೇಜಿನ ಉಪನ್ಯಾಸಕರುಗಳು, ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರು ಮತ್ತು ಉಪನ್ಯಾಸಕರಾದ ಅಂಬಿಕಾ ಉತ್ತಪ್ಪ ಸ್ವಾಗತಿಸಿದರು. ಗ್ರಂಥಾಪಾಲಕಿ ಡಾ. ಮುತ್ತಮ್ಮ ಮತ್ತು ವಿದ್ಯಾರ್ಥಿಗಳಾದ ಧನ್ಯಶ್ರೀ, ಶುಭಮಂಗಳ ಕಾರ್ಯಕ್ರಮ ನಿರೂಪಿಸಿದರು. ಎ.ಕ್ಯೂ.ಎ.ಸಿ. ಸಂಚಾಲಕರು ಮತ್ತು ಉಪನ್ಯಾಸಕಿ ಕೆ.ಜಿ. ವೀಣಾ ವಂದಿಸಿದರು.