ಮಡಿಕೇರಿ, ಜೂ. ೨೧: ಯೋಗ ಸ್ವಂತಕ್ಕೆ ಹಾಗೂ ಸಮಾಜಕ್ಕಾಗಿ ಎಂಬ ಧ್ಯೇಯವಾಕ್ಯದೊಂದಿಗೆ ೧೦ನೇ ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಉಲ್ಲಾಸಭರಿತವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಯೋಗ ಸಂಸ್ಥೆಗಳು, ಶಾಲಾ - ಕಾಲೇಜುಗಳು, ವಿವಿಧ ಸಂಘ - ಸಂಸ್ಥೆಗಳ ವತಿಯಿಂದ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ನಗರದ ಕೆಳಗಿನ ಗೌಡ ಸಮಾಜದಲ್ಲಿ ಯೋಗ ದಿನಾಚರಣೆ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ರಾಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಓ ವರ್ಣಿತ್ನೇಗಿ, ಆಯುಷ್ ಅಧಿಕಾರಿ ಡಾ. ರೇಣುಕಾದೇವಿ ಹಾಜರಿದ್ದರು.
ಬಳಿಕ ಡಿಸಿ, ಎಸ್ಪಿ, ಸಿಇಓ, ನಗರಸಭಾ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಮತ್ತಿತರರು ಯೋಗಾಭ್ಯಾಸ ಮಾಡಿದರು. ಯೋಗ ಸಂಘಟನ್ ಸಂಚಾಲಕ ಕೆ.ಕೆ. ಮಹೇಶ್ಕುಮಾರ್ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ
(ಮೊದಲ ಪುಟದಿಂದ) ಮಹಾವಿದ್ಯಾಲಯ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕ, ನೆಹರು ಯುವ ಕೇಂದ್ರ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗಕೇಂದ್ರ, ಪತಂಜಲಿ ಯೋಗ ಶಿಕ್ಷಣ ಸಮಿತಿ, ನೀಮಾ ಸಂಸ್ಥೆ, ಆರ್ಟ್ ಆಫ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.ಪಾಲಿಬೆಟ್ಟ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪಾಲಿಬೆಟ್ಟ ಸರ್ಕಾರಿ ಪ್ರೌಢÀ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕಿ ಆರತಿ ಯೋಗದ ಬಗ್ಗೆ ಮಾತನಾಡಿ ಯೋಗ ಮಾಡುವುದರಿಂದ ಶರೀರ ಹಾಗೂ ಮನಸ್ಸಿಗೆ ಉಲ್ಲಾಸ ಸಿಗುತ್ತದೆ ಎಂದರು. ಮೂಖ್ಯೋಪಾಧ್ಯಾಯ ಆಶ್ರಫ್, ಶಿಕ್ಷಕರುಗಳಾದ ಮಮತಾ, ನಯನ, ಗಮ್ಯ ಮತ್ತು ಸವಿತಾ ಉಪಸ್ಥಿತರಿದ್ದರು.
ಪೊನ್ನಂಪೇಟೆ: ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಅಂತರರಾಷ್ಟಿçÃಯ ಯೋಗ ದಿನ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಟಿ.ಎಸ್. ಮಹೇಶ್ ವಿವಿಧ ಯೋಗಾಭ್ಯಾಸ ಮಾಡಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಸಮೂಹ ಸಂಪನ್ಮೂಲ ವ್ಯಕ್ತಿ ಟಿ.ಬಿ. ಜೀವನ್, ಶಿಕ್ಷಕರಾದ ಎಂ. ಎ.ಜಾನ್ಸಿ, ಐ.ಎಂ. ರೋಸಿ, ವಿ.ಜೆ. ಫಿಲೋಮಿನ, ಎಂ.ಎನ್. ಶಕೀಲಾ ಭಾನು, ಎಚ್.ಸಿ. ಮಂಗಳಾಗಿ, ಸಿ.ಪಿ. ಗಂಗಾಮಣಿ, ಎನ್. ನಿಂಗರಾಜು, ವಿನಿತ, ರೇಖಾ, ಗೀತಾ ಸಂಧಿಗೋಡ ಮಠ, ಅತಿಥಿ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಅಡುಗೆ ಸಿಬ್ಬಂದಿ ಭಾಗವಹಿಸಿದ್ದರು.
ಗೋಣಿಕೊಪ್ಪಲು: ಗೋಣಿ ಕೊಪ್ಪಲು ಕಾವೇರಿ ಕಾಲೇಜು ವತಿಯಿಂದ ಕಾಲೇಜಿನ ಚಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ಅಂತರರಾಷ್ಟಿçÃಯ ಯೋಗ ದಿನ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಕಾವೇರಿ ಪದವಿ ಪೂರ್ವ ಕಾಲೇಜು ಇತಿಹಾಸ ಉಪನ್ಯಾಸಕಿ ಹಾಗೂ ಯೋಗಪಟು ಪಿ. ಸಿ. ಮೀನಾಕ್ಷಿ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊAಡು, ಏಕಾಗ್ರತೆಯನ್ನು ಮೈಗೂಡಿಸಿಕೊಳ್ಳಲು ಯೋಗ ಸಹಾಯಕಾರಿಯಾಗಿದೆ ಎಂದರು. ಈ ಸಂದರ್ಭ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ. ಬಿ. ಕಾವೇರಿಯಪ್ಪ, ಕಾವೇರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್.ಮಾದಯ್ಯ, ಉಪ ಪ್ರಾಂಶುಪಾಲೆ ಎಂ. ಕೆ. ಪದ್ಮ, ಹಿರಿಯ ಉಪನ್ಯಾಸಕ ಬ್ರೆöÊಟಕುಮಾರ್, ಎನ್ಎಸ್ಎಸ್ ಅಧಿಕಾರಿಗಳಾದ ಎನ್.ಪಿ. ರೀತಾ, ಕೆ.ಎಂ. ಕುಸುಮ್ ಉಪಸ್ಥಿತರಿದ್ದರು. ಪಿ.ಸಿ.ಮೀನಾಕ್ಷಿ ಅವರ ಮಾರ್ಗದರ್ಶನದಲ್ಲಿ ನಡೆದ vಯೋಗ ಕಾರ್ಯಕ್ರಮದಲ್ಲಿ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಐ. ಡಿ. ಲೇಪಾಕ್ಷಿ, ಆಂಗ್ಲ ಭಾಷಾ ಉಪನ್ಯಾಸಕಿ ಎಂ.ಬಿ. ಪೂವಮ್ಮ ಯೋಗ ಪ್ರದರ್ಶನ ಮಾಡಿದರು. ಎನ್ಸಿಸಿ ಕೆಡೆಟ್ಗಳು, ಎನ್ ಎಸ್ ಎಸ್ ಸ್ವಯಂ ಸೇವಕರು, ಪದವಿ, ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎನ್ಎಸ್ಎಸ್ ಅಧಿಕಾರಿಗಳಾದ ಎನ್.ಪಿ.ರೀತಾ, ಕೆ.ಎಂ. ಕುಸುಮ್, ಉಪನ್ಯಾಸಕರು ಇದ್ದರು.ಕಡಂಗ: ಸರ್ಕಾರಿ ಶಾಲೆಯಲ್ಲಿ ಅಂತರರಾಷ್ಟಿçÃಯ ಯೋಗ ದಿನವನ್ನು, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರ ಸಮ್ಮುಖದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ವಿವಿಧ ಯೋಗ ಭಂಗಿಗಳನ್ನು ಮಾಡಲಾಯಿತು. ಎಸ್ಡಿಎಂಸಿ ಅಧ್ಯಕ್ಷೆ ಫಾತಿಮಾ, ಶಾಲಾ ಮುಖ್ಯ ಶಿಕ್ಷಕಿ ಶಾಂತಿಕುಮಾರಿ ಪಿ.ಎಂ., ಶಾಲಾ ಶಿಕ್ಷಕರು ಹಾಜರಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ ಎಂ.ಬಿ. ರವರು ಯೋಗ ತರಬೇತುದಾರರಾಗಿ ಕಾರ್ಯಕ್ರಮ ನಡೆಸಿಕೊಟ್ಟರು.
ವೀರಾಜಪೇಟೆ: ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಯೋಗ ಸಹಕಾರಿಯಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರು ಮತ್ತು ಸೆಂಟ್ ಆನ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು.
ಕಾಲೇಜಿನಲ್ಲಿ ಎನ್.ಎಸ್.ಎಸ್, ದೈಹಿಕ ಶಿಕ್ಷಣ ವಿಭಾಗ, ರೆಡ್ ಕ್ರಾಸ್ ಘಟಕ ಮತ್ತು ಸೆಂಟ್ ಆನ್ಸ್ ಪಿಯು ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ, ಅಂತರ ರಾಷ್ಟಿçÃಯ ಯೋಗ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು ಯೋಗದಿಂದ ಮಾನಸಿಕ ಸ್ಥಿರತೆ ಮೂಡಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದರು.
ವೇದಿಕೆಯಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕದ ಅಧಿಕಾರಿಗಳಾದ ಬಿ.ಎನ್. ಶಾಂತಿಭೂಷಣ್, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ದೈಹಿಕ ಶಿಕ್ಷಣ ನಿರ್ದೇಶಕ ಬಿ.ವಿ. ರಾಜ ರೈ, ರೆಡ್ ಕ್ರಾಸ್ ಅಧಿಕಾರಿ ವಿಲೀನ ಗೋನ್ಸಾಲ್ವೇಸ್ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕ ರಾಜ ರೈ ರವರು ಮತ್ತು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಹೆಚ್.ಆರ್. ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಕಡಂಗ: ಸರ್ಕಾರಿ ಶಾಲೆಯಲ್ಲಿ ಅಂತರರಾಷ್ಟಿçÃಯ ಯೋಗ ದಿನವನ್ನು, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರ ಸಮ್ಮುಖದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ವಿವಿಧ ಯೋಗ ಭಂಗಿಗಳನ್ನು ಮಾಡಲಾಯಿತು. ಎಸ್ಡಿಎಂಸಿ ಅಧ್ಯಕ್ಷೆ ಫಾತಿಮಾ, ಶಾಲಾ ಮುಖ್ಯ ಶಿಕ್ಷಕಿ ಶಾಂತಿಕುಮಾರಿ ಪಿ.ಎಂ., ಶಾಲಾ ಶಿಕ್ಷಕರು ಹಾಜರಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ ಎಂ.ಬಿ. ರವರು ಯೋಗ ತರಬೇತುದಾರರಾಗಿ ಕಾರ್ಯಕ್ರಮ ನಡೆಸಿಕೊಟ್ಟರು.
ಸಿದ್ದಾಪುರ : ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸಿದ್ದಾಪುರ ಗ್ರಾಮ ಪಂಚಾಯಿತಿ ವತಿಯಿಂದ ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿರುವ ಅಮೃತ ಸರೋವರ ಕೆರೆಯ ಬಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೇಮಾ ಗೋಪಾಲ್ ಮಾನಸಿಕ ಆರೋಗ್ಯಕ್ಕೆ ಯೋಗಾಸನ ಬಹಳ ಮುಖ್ಯ ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿ ಸ್ವಾಮಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮೋಹನ್ ಹಾಗೂ ಶಾಲಾ ಮಕ್ಕಳು ಯೋಗಾಚರಣೆ ಯಲ್ಲಿ ಭಾಗವಹಿಸಿದ್ದರು.