ಮಡಿಕೇರಿ, ಜೂ. ೨೧ : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ದೇವಟ್ಪರಂಬ್ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು.
ಹತ್ಯೆಗೀಡಾದ ಹಿರಿಯರಿಗೆ ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸಿ ಕೊಡವ ಜನಾಂಗದ ಯೋಗಕ್ಷೇಮಕ್ಕಾಗಿ ಮತ್ತು ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಲಾಯಿತು.
ಗಾಳಿಯಲ್ಲಿ ಗುಂಡು ಹಾರಿಸಿ ಹಿರಿಯರಿಗೆ ಗೌರವ ಅರ್ಪಿಸಿದರು. ಸಿಎನ್ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಮಂದಪAಡ ಮನೋಜ್, ಅರೆಯಡ ಗಿರೀಶ್ ಹಾಗೂ ಚೀಯಬೇರ ಸತೀಶ್ ಪಾಲ್ಗೊಂಡಿದ್ದರು.