ವೀರಾಜಪೇಟೆ, ಜೂ. ೨೧: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ ಎರಡನೇ ಬಾರಿ ಅಧ್ಯಕ್ಷ ಸ್ಥಾನ ಅಲಂಕರಿಸಿದ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಅವರನ್ನು ಮಾಜಿ ಸೈನಿಕರ ಸಹಕಾರ ಸಂಘ ನಿಯಮಿತ ಇವರ ವತಿಯಿಂದ ಸನ್ಮಾನಿಸಲಾಯಿತು.
ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಮಾತನಾಡಿ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಂದ ಹಲವಾರು ರೈತರಿಗೆ ಮತ್ತು ಮಾಜಿ ಸೈನಿಕರಿಗೆ ಉಪಯೋಗ ವಾಗುತ್ತಿದೆ. ಉತ್ತಮ ಸೇವೆ ಸಲ್ಲಿಸುತ್ತಿರುವ ಅಧ್ಯಕ್ಷರ ಕಾರ್ಯ ವೈಖರಿಯನ್ನು ಪ್ರಶಂಸಿಸಿ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭ ಮಾಜಿ ಸೈನಿಕರ ಸಹಕಾರ ಸಂಘದ ಉಪಾಧ್ಯಕ್ಷ ಬಿ.ಎಸ್. ಚಂದ್ರಶೇಖರ್ ರಾಜ, ನಿರ್ದೇಶಕರುಗಳಾದ ಪುಗ್ಗೆರ ನಂದಾ, ಚೇಂದ್ರಿಮಾಡ ಕೆ. ನಂಜಪ್ಪ, ತೋರೆರ ಪೂವಯ್ಯ, ಕೊಂಗAಡ ಭೀಮಯ್ಯ, ಎ.ಕೆ. ಅಪ್ಪಯ್ಯ, ಸಲಾಂ ಎಂ.ಕೆ., ಅಣ್ಣಳಮಾಡ ಸುಬ್ಬಯ್ಯ, ಬಾಳೆಕುಟ್ಟಿರ ಬೋಪಯ್ಯ ಉಪಸ್ಥಿತರಿದ್ದರು.