ಮಡಿಕೇರಿ, ಜೂ. ೨೧: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ.

ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬAಧಿಸಿದ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬAಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ, (ರೂಂ ನಂ-೨೨, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ) ಇಲ್ಲಿಗೆ ಪರಿಶೀಲನೆಗೆ ಹಾಜರಾಗಬೇಕು.

ಹಾಗೆಯೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ ೨೫ ನೇ ತಾರೀಖಿನ ಒಳಗಾಗಿ ‘ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಸ್ವಯಂ ಘೋಷಣೆ ನೀಡಬೇಕಾಗಿರುತ್ತದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೧೮೦೦ ೫೯೯ ೯೯೧೮ ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ದೂ. ೮೨೯೬೦೨೦೮೨೬ / ೮೧೨೩೩೧೨೩೧೯ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.