ನಾಪೋಕ್ಲು, ಜೂ. ೨೧: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಅಭಿಯಾನ ಚೆಂಬು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಮಾಪ್ತಿಗೊಂಡಿತು.
ಮಾನವನ ಮಿತಿಮೀರಿದ ಚಟುವಟಿಕೆಗಳಿಂದ ಪರಿಸರ ಮಾಲಿನ್ಯವಾಗುತ್ತಿದೆ. ಗಿಡಗಳನ್ನು ನೆಟ್ಟು ಪೋಷಣೆ ಮಾಡುವುದರಿಂದ ಉತ್ತಮ ಪರಿಸರವನ್ನು ನಿರ್ಮಿಸಬಹುದು ಎಂದು ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ರಂಜಿತ್ ಹೇಳಿದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ವಿವಿಧ ಶಾಲೆಗಳಲ್ಲಿ ಭೂಮಿಯ ಮರುಸ್ಥಾಪನೆ ಮತ್ತು ಹಸಿರು, ಬರ ಪರಿಸ್ಥಿತಿ ನಿರ್ವಹಣೆ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚೆಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ಸಂಪಾಜೆ ವಲಯ ಅಧ್ಯಕ್ಷ ಎಂ. ಧನಂಜಯ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿAದ ಪರಿಸರ ಸಂರಕ್ಷಣೆ ಅರಿವು ಮೂಡಿಸುವ ಉದ್ದೇಶದಿಂದ ಮಡಿಕೇರಿ ತಾಲೂಕಿನ ಆಯ್ದ ೧೫ ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾಟಕೇರಿ, ಬೆಳಕುಮಾನಿ, ಜೋಡುಪಾಲ, ಚೆಂಬು ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ವಿವಿಧ ಶಾಲೆಗಳಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಸಂರಕ್ಷಿಸುವAತೆ ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಗಿಡಗಳನ್ನು ನೀಡಿದ್ದು, ಅದರ ಸಂಪೂರ್ಣ ಪೋಷಣೆಯ ಜವಾಬ್ದಾರಿಯನ್ನು ಮಕ್ಕಳು ಮಾಡಲಿದ್ದಾರೆ ಎಂದರು.
ಸAಸ್ಥೆಯ ಕಾರ್ಯದರ್ಶಿ ಕೆ.ಬಿ. ಉಷಾರಾಣಿ ಮಾತನಾಡಿ, ಪರಿಸರವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ನಮ್ಮ ಭೂಮಿಯನ್ನು ಕಲುಷಿತಗೊಳಿಸಲು ಬಿಡಬಾರದು. ಗಿಡಮರಗಳನ್ನು ಕಡಿದು ಪರಿಸರವನ್ನು ಪ್ಲಾಸ್ಟಿಕ್ ಮಯವಾಗಿ ಮಾಡಿ ನೆಲ, ಜಲ, ವಾಯುಮಾಲಿನ್ಯ ಉಂಟು ಮಾಡುತ್ತಿದ್ದೇವೆ. ಇದನ್ನು ತಪ್ಪಿಸಲು ಎಲ್ಲರೂ ಪರಿಸರ ಸಂರಕ್ಷಣೆ ವಿಚಾರದಲ್ಲಿ ಜಾಗೃತರಾಗಬೇಕಾಗಿದೆ.
ನಮ್ಮ ಮಕ್ಕಳನ್ನು ನಾವು ಯಾವ ರೀತಿ ಪೋಷಣೆ ಮಾಡುತ್ತೇವೋ ಅದೇ ರೀತಿ ಮರ ಗಿಡಗಳನ್ನು ನೆಟ್ಟು ಪೋಷಣೆ ಮಾಡಿದರೆ ಮಾತ್ರ ನಮ್ಮ ಮುಂದಿನ ತಲೆಮಾರು ಬದುಕಲು ಸಾಧ್ಯ ಎಂದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನ ಚೆಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಪ್ತಿಗೊಂಡಿತು. ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.