ಕುಶಾಲನಗರ, ಜೂ. ೨೧: ಕುಶಾಲನಗರದ ವಾರದ ಸಂತೆಯಲ್ಲಿ ಈ ಮಂಗಳವಾರ ಸಂತೆಗೆ ತೆರಳಿದ ಗ್ರಾಹಕರು ನಿರಾಳವಾಗಿ ಓಡಾಡುವಂತಹ ಪರಿಸ್ಥಿತಿಯನ್ನು ಸ್ಥಳೀಯ ಆಡಳಿತದ ಅಧಿಕಾರಿಗಳು ಸೃಷ್ಟಿ ಮಾಡಿ ಎಲ್ಲರ ಗಮನ ಸೆಳೆಯುವ ದೃಶ್ಯ ಕಂಡು ಬಂದಿತು.

ಕಳೆದ ನಾಲ್ಕು ವರ್ಷಗಳಿಂದ ಕುಶಾಲನಗರ ವಾರದ ಸಂತೆಯನ್ನು ಕೆ.ಇ.ಬಿ. ಬಳಿಯ ಹಳೆಯ ಮಾರುಕಟ್ಟೆಯ ಪ್ರದೇಶದಿಂದ ತಾಂತ್ರಿಕ ಕಾರಣದ ಹಿನ್ನೆಲೆ ಕುಶಾಲನಗರ-ಮೈಸೂರು ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣಕ್ಕೆ ಸ್ಥಳಾಂತರಗೊಳಿಸಲಾಗಿತ್ತು.

ನೂತನ ಮಾರುಕಟ್ಟೆ ಆವರಣದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಸ್ಥಳಾವಕಾಶ ಇದ್ದರೂ ಕೂಡ ಸಂತೆ ವ್ಯಾಪಾರಿಗಳು ಎಲ್ಲೆಂದರಲ್ಲಿ ವ್ಯಾಪಾರ ಮಾಡುತ್ತಿದ್ದು, ಇದರಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿತ್ತು.

ಕುಶಾಲನಗರ ಮೈಸೂರು ರಾಷ್ಟಿçÃಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಕೂಡ ತೊಡಕು ಉಂಟಾಗಿತ್ತು.

ಸAತೆಗೆ ತೆರಳುವ ನಾಗರಿಕರು ಕೂಡ ಹಲವು ಸಮಸ್ಯೆಗಳ ನಡುವೆ ತಮ್ಮ ಅಗತ್ಯ ವಸ್ತುಗಳ ಖರೀದಿ ಮಾಡುವ ವೇಳೆ ಅನಾನುಕೂಲತೆಗೆ ಒಳಗಾಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಈ ಬಗ್ಗೆ ಇತ್ತೀಚೆಗೆ ಸ್ಥಳೀಯ ಪತ್ರಕರ್ತರು ತಾಲೂಕು ತಹಶೀಲ್ದಾರ್ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆಯ ಆಡಳಿತ ಅಧಿಕಾರಿಗಳು ಆಗಿರುವ ಕಿರಣ್ ಗೌರಯ್ಯ ಅವರ ಗಮನಕ್ಕೆ ತಂದ ಬೆನ್ನಲ್ಲೇ ಸಂತೆ ಮಾರುಕಟ್ಟೆಗೆ ಸಂಬAಧಿಸಿದ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಸಭೆ ಕರೆದು ಸಮಸ್ಯೆಯ ಬಗ್ಗೆ ಚರ್ಚೆ ನಡೆದು ಪರಿಹಾರಕ್ಕೆ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣ ಠಾಣೆ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಸಂಚಾರ ವಿಭಾಗದ ಠಾಣಾಧಿಕಾರಿ ಕಾಶೀನಾಥ್ ಬಗಲಿ ಮತ್ತು ಪೊಲೀಸ್ ಸಿಬ್ಬಂದಿಗಳು ಆರ್.ಎಂ.ಸಿ. ಅಧಿಕಾರಿ ಸಿಬ್ಬಂದಿಗಳು ಹಾಗೂ ಸಂತೆ ಮಾರುಕಟ್ಟೆ ಸಂಘದ ಪ್ರತಿನಿಧಿಗಳ ಸಹಾಯದೊಂದಿಗೆ ಬೆಳಿಗ್ಗೆ ೬ ಗಂಟೆಯಿAದಲೇ ಕಾರ್ಯಾಚರಣೆ ಆರಂಭಿಸಿ ಸಮರ್ಪಕ ವ್ಯವಸ್ಥೆ ಕಲ್ಪಿಸುವಲ್ಲಿ ಬಹುತೇಕ ಯಶಸ್ವಿಯಾದರು.

ಎಲ್ಲೆಂದರಲ್ಲಿ ಸಂತೆ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅವರುಗಳನ್ನು ಪ್ರತ್ಯೇಕ ಸ್ಥಳಗಳಲ್ಲಿ ವ್ಯಾಪಾರ ಮಾಡುವಂತೆ ಮನವೊಲಿಸುವಲ್ಲಿ ಯಶಸ್ವಿ ಯಾದರು. ಸಂತೆಗೆ ಬರುವ ಗ್ರಾಹಕರು ತಮ್ಮ ವಾಹನಗಳನ್ನು ಏಕಮುಖವಾಗಿ ಸಂಚರಿಸುವAತೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬಹುತೇಕ ಸಂತೆ ವ್ಯಾಪಾರಿಗಳು ಮತ್ತು ಗ್ರಾಹಕರು ಈ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂತೆ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಗೋವಿಂದ್, ಈ ಬಗ್ಗೆ ಪ್ರತಿಕ್ರಿಯಿಸಿ ಮಾರುಕಟ್ಟೆಯ ಆವರಣದ ಸ್ವಚ್ಛತೆಯ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಗಮನಹರಿಸಬೇಕು ಎಂದಿದ್ದಾರೆ. ಮುಂದಿನ ವಾರಗಳಿಂದ ಇನ್ನು ಹೆಚ್ಚಿನ ರೀತಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸುವುದರೊಂದಿಗೆ ಯಾವುದೇ ಅವ್ಯವಸ್ಥೆ ಉಂಟಾಗದAತೆ ಎಚ್ಚರ ವಹಿಸಲಾಗುವುದು ಎಂದು ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್, ಸಂಚಾರಿ ಠಾಣಾಧಿಕಾರಿ ಕಾಶಿನಾಥ್ ಬಗಲಿ ಸ್ಥಳಕ್ಕೆ ತೆರಳಿದ ಸುದ್ದಿಗಾರರೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.