ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ

ಬೆಂಗಳೂರು, ಜೂ. ೨೧: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ತಾ. ೨೨ ರಂದು (ಇಂದು) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ರಾಜ್ಯದಾದ್ಯಂತ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಮತ್ತು ಬಿರುಗಾಳಿ (೩೦-೪೦ ಕಿ.ಮೀ.) ಬೀಸುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ಎಚ್ಚರಿಕೆ ನೀಡಿದೆ. ಕೆಎಸ್‌ಎನ್‌ಡಿಎಂಸಿ ಸಲಹೆಯ ಪ್ರಕಾರ, ತಾ. ೨೩ ರಿಂದ ೨೬ ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಇನ್ನು ಭಾರತದ ಹವಾಮಾನ ಇಲಾಖೆ ಸಹ ಹವಾಮಾನ ಮುನ್ಸೂಚನೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ ಒಳನಾಡಿನ ಕರಾವಳಿ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ನೈಋತ್ಯ ಮಾನ್ಸೂನ್ ಮಹಾರಾಷ್ಟ್ರದ ಇನ್ನೂ ಕೆಲವು ಭಾಗಗಳಿಗೆ ಮುಂದುವರೆದಿದ್ದರೂ, ವಿದರ್ಭದ ಉಳಿದ ಭಾಗಗಳು, ಮಧ್ಯಪ್ರದೇಶದ ಕೆಲವು ಭಾಗಗಳು, ಛತ್ತೀಸ್‌ಗಢ ಮತ್ತು ಒಡಿಶಾದ ಕೆಲವು ಭಾಗಗಳು, ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಜೂನ್ ೨೧ ರಿಂದ ಜೂನ್ ೨೫ ರ ನಡುವೆ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ವಾಸ್ತವವಾಗಿ, ತಾ. ೨೩ ರಿಂದ ರಾಜ್ಯದಾದ್ಯಂತ ಭಾರೀ ಮಳೆ ಮತ್ತು ವ್ಯಾಪಕ ಮಳೆಯ ನಿರೀಕ್ಷೆಯಲ್ಲಿದ್ದೇವೆ ಎಂದು ಐಎಂಡಿ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅಣ್ಣ ಸೂರಜ್ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

ಹಾಸನ, ಜೂ. ೨೧: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿರುವ ಬೆನ್ನಲ್ಲೇ ಮಾಜಿ ಸಚಿವ ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಪ್ರಜ್ವಲ್ ರೇವಣ್ಣ ಅವರ ಅಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅರಕಲಗೂಡು ಜೆ.ಡಿ.ಎಸ್. ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ರೇವಣ್ಣ ಕುಟುಂಬ ಮತ್ತೆ ಮುಜುಗರಕ್ಕೀಡಾದಂತಾಗಿದೆ. ಸೂರಜ್ ರೇವಣ್ಣ ಅವರು ಜೂನ್ ೧೬ ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನಿಗೆ ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಜೆ.ಡಿ.ಎಸ್. ಕಾರ್ಯಕರ್ತ ಈ ಸಂಬAಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ, ಡಿ.ಜಿ. ಮತ್ತು ಐ.ಜಿ.ಪಿ. ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲ್ಲ; ಜಿ. ಪರಮೇಶ್ವರ್

ಬೆಂಗಳೂರು, ಜೂ. ೨೧: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದಾಗ ಜೈಲಿನಲ್ಲಿ ಯಾವುದೇ ಹೆಚ್ಚುವರಿ ಸೌಲಭ್ಯಗಳನ್ನು ನೀಡ ಲಾಗುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಚಿತ್ರದುರ್ಗ ಮೂಲದ ೩೩ ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ನಟ ದರ್ಶನ್ ಅವರನ್ನು ನ್ಯಾಯಾಲಯ ೨ ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. 'ಅಷ್ಟರೊಳಗೆ ತನಿಖೆ ಪೂರ್ಣಗೊಂಡರೆ, ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು' ಎಂದು ಹೇಳಿದರು. ದರ್ಶನ್ ಪ್ರಕರಣದಲ್ಲಿ ಯಾವುದೇ ಪ್ರತಿಕ್ರಿಯೆ ನೀಡದಂತೆ ಅಥವಾ ಮಧ್ಯಪ್ರವೇಶಿಸದಂತೆ ಸಿಎಂ ಸಿದ್ದರಾಮಯ್ಯ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂಬ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ತಿಳಿದಂತೆ ಯಾವುದೇ ಸಚಿವರು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅಧಿಕಾರಿಗಳು ನಮಗೆ ಮಾಹಿತಿ ನೀಡುತ್ತಾರೆ ಮತ್ತು ಯಾವುದೇ ಹಸ್ತಕ್ಷೇಪ ಅಗತ್ಯವಿಲ್ಲ. ಮುಖ್ಯಮಂತ್ರಿಯಾಗಲಿ, ನಾನಾಗಲಿ ಯಾರನ್ನೂ ಸಂಪರ್ಕಿಸಿಲ್ಲ ಎಂದರು. ತಮ್ಮ ಪಕ್ಷದವರಾಗಿದ್ದರೂ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುವುದು. ಆರೋಪಿಗಳು ಎಸಗಿದ ಅಪರಾಧದ ಆಧಾರದ ಮೇಲೆ ತನಿಖೆಯನ್ನು ಮುಂದುವರಿಸುತ್ತೇವೆ, ಅದು ಪಕ್ಷಕ್ಕೆ ಸಂಬAಧಿಸಿರುವುದಿಲ್ಲ ಎಂದರು.

ರಾಜ್ಯದಲ್ಲಿ ಸಂಭ್ರಮದ ಯೋಗ ದಿನಾಚರಣೆ

ಬೆಂಗಳೂರು, ಜೂ. ೨೧: ರಾಜ್ಯಾದ್ಯಂತ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ಇಂದು ಸಂಭ್ರಮದಿAದ ಆಚರಿಸಲಾಯಿತು. ಮುಖ್ಯ ಕಾರ್ಯಕ್ರಮ ವಿಧಾನಸೌಧದ ಮುಂಭಾಗ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಡಿ.ಸಿ.ಎಂ. ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಜನತೆ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, ಮಾನಸಿಕ ಶಾಂತಿ ಮತ್ತು ಭಾವನಾತ್ಮಕ ತೃಪ್ತಿಯ ಮೇಲೆ ಯೋಗದ ಆಳವಾದ ಪ್ರಭಾವವನ್ನು ಉಲ್ಲೇಖಿಸಿ ಭಾರತೀಯ ಸಂಸ್ಕೃತಿಯಲ್ಲಿ ಯೋಗದ ಆಳವಾದ ಬೇರುಗಳನ್ನು ಮತ್ತು ಅದರ ಜಾಗತಿಕ ಮಹತ್ವವನ್ನು ಒತ್ತಿ ಹೇಳಿದರು. ಅದರ ಪ್ರಾಮುಖ್ಯತೆಯನ್ನು ನಮ್ಮ ಧರ್ಮ ಗ್ರಂಥಗಳಲ್ಲಿ ಉತ್ತಮವಾಗಿ ದಾಖಲಿಸಲಾಗಿದೆ ಮತ್ತು ಈಗ ವಿಶ್ವಾದ್ಯಂತ ಗುರುತಿಸಲ್ಪಟ್ಟಿದೆ, ಯೋಗದ ಗುರುವಾಗಿ ಭಾರತದ ಸ್ಥಾನವನ್ನು ಗಟ್ಟಿಗೊಳಿಸಿದೆ, ಯೋಗವು ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸುವ ಸಮಗ್ರ ಅಭ್ಯಾಸವಾಗಿದೆ ಎಂದು ರಾಜ್ಯಪಾಲರು ಹೇಳಿದರು.