ಮಡಿಕೇರಿ, ಜೂ. ೨೧: ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯ ದಲ್ಲಿ ಇತ್ತೀಚೆಗೆ ಸಾರ್ವಜನಿಕ ರಿಗಾಗಿ ನಡೆದ ಕಣ್ಣು ತಪಾಸಣಾ ಶಿಬಿರದಲ್ಲಿ ಅವಶ್ಯ ವಿದ್ದವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಯಿತು.
ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜ್ನ ಪ್ರಬಾರ ಪ್ರಾಂಶುಪಾಲ ಪಿ. ಪರ್ವತರಾಜನ್ ಅವರು ಕನ್ನಡಕವನ್ನು ವಿತರಿಸಿ ಮಾತನಾಡಿದರು.
ಇದೊಂದು ಸಾಮಾಜಿಕ ಕಳಕಳಿಯ ಉತ್ತಮ ಕಾರ್ಯಕ್ರಮ ವಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಇದು ಹೆಚ್ಚು ಪ್ರಯೋಜನವಾಗಲಿದೆ. ಇನ್ನು ಮುಂದೆಯೂ ಸಂಘ ಇಂತಹ ಪ್ರಯೋಜನಕಾರಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಲಿ ಎಂದು ಸಲಹೆ ನೀಡಿದರು. ಕಾಲೇಜಿನ ರಿಜಿಸ್ಟಾçರ್ ಕೆ.ಎ. ಮೇರಿ ಮಾತನಾಡಿ, ಈ ಇಳಿ ವಯಸ್ಸಿನಲ್ಲೂ ಸಂಘದ ಪದಾಧಿಕಾರಿ ಗಳು ಕೈಗೊಂಡಿರುವ ಜನಪರ ಕಾರ್ಯಕ್ರಮ ಅತ್ಯುತ್ತಮವಾಗಿದೆ. ಈ ರೀತಿಯ ಕಾರ್ಯಕ್ರಮಗಳನ್ನು ನಡೆಸುವುದರಿಂದ ಬಡ ಜನರ ಆಶೋತ್ತರಗಳಿಗೆ ಸಹಾಯ ಮಾಡಿದಂತಾಗುತ್ತದೆ ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಕುದುಪಜೆ ಬೋಜಪ್ಪ, ಕಾರ್ಯದರ್ಶಿ ಬಾರಿಕೆ ಅಯ್ಯಪ್ಪ, ಸಹ ಕಾರ್ಯದರ್ಶಿ ಅತ್ತೇಡಿ ಕೃಷ್ಣಪ್ಪ, ನಿರ್ದೇಶಕರುಗಳಾದ ಬೈತಡ್ಕ ಬೆಳ್ಯಪ್ಪ, ತಳೂರು ಕಾಳಪ್ಪ, ಹೊಸೊಕ್ಲು ಪೊನ್ನಪ್ಪ, ಕುಲ್ಲಚೆಟ್ಟಿ ಪೂವಯ್ಯ, ಮತ್ತಿತರ ಪ್ರಮುಖರು ಭಾಗವಹಿಸಿದ್ದರು.