ಗೋಣಿಕೊಪ್ಪಲು, ಜೂ.೨೧: ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ಹಲವು ಮಾರ್ಗಗಳಿವೆ. ಭಾರತೀಯ ಜನತಾ ಪಾರ್ಟಿಯು ಪ್ರತಿಪಕ್ಷವಾಗಿರುವು ದರಿಂದ ಕರ್ನಾಟಕ ಸರ್ಕಾರದ ವಿರುದ್ಧ ಇಂಧನ ಬೆಲೆ ಏರಿಕೆಯ ವಿಚಾರದಲ್ಲಿ ರಾಜ್ಯದೆಲ್ಲೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ. ಎಲ್ಲಿಯೂ ಯಾವುದೇ ಜನಪ್ರತಿನಿಧಿಗಳ ಭಾವಚಿತ್ರವಿಟ್ಟು ಅಣಕು ಶವಯಾತ್ರೆ ಮಾಡಿ ಸುಟ್ಟಿರುವ ಘಟನೆ ನಡೆದಿಲ್ಲ. ಆದರೆ, ಕೊಡಗು ಜಿಲ್ಲೆಯಲ್ಲಿ ಶವ ಸಂಸ್ಕಾರದ ಅರಿವಿಲ್ಲದ ಬಿಜೆಪಿಯವರು ಮಾಡಿದ ಪ್ರತಿಭಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾ. ೨೪ರಂದು ಪೊನ್ನಣ್ಣ ಅವರ ಪರವಾಗಿ ಪೂಜೆ
ಮಡಿಕೇರಿ : ವೀರಾಜಪೇಟೆಯ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿ ಬಿಜೆಪಿ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸಿದೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಹೇಳಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿಜೆಪಿಯ ಈ ವರ್ತನೆಯಿಂದ ಕೊಡಗು ಜಿಲ್ಲೆಯ ಘನತೆಗೆ ಧಕ್ಕೆಯಾಗಿದೆ ಎಂದು ತಿಳಿಸಿದ್ದಾರೆ.
ಈ ರೀತಿಯ ಪ್ರತಿಭಟನೆಗಳ ಮೂಲಕ ಪೊನ್ನಣ್ಣ ಅವರ ಮನೋಸ್ಥೆöÊರ್ಯ ಕುಗ್ಗಿಸಬಹುದೆನ್ನುವ ಭ್ರಮೆಯಲ್ಲಿರುವ ಬಿಜೆಪಿ ತಾನು ತೋಡಿದ ಖೆಡ್ಡಾಕ್ಕೆ ತಾನೇ ಬೀಳಲಿದೆ. ಬಿಜೆಪಿಯ ಕೀಳು ಮಟ್ಟದ ವರ್ತನೆಯಿಂದ ಪೊನ್ನಣ್ಣ ಪರ ಜನಬಲ ಮತ್ತಷ್ಟು ಹೆಚ್ಚಾಗಲಿದೆ. ಈಗಾಗಲೇ ಅವರ ಅಭಿಮಾನಿಗಳು ಹಾಗೂ ಕ್ಷೇತ್ರದ ಜನ ಯೋಗಕ್ಷೇಮ ಕೋರಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ, ಕಾಂಗ್ರೆಸ್ ಪಕ್ಷದ ವತಿಯಿಂದಲೂ ಜೂ.೨೪ ರಂದು ಎಲ್ಲಾ ವಲಯ ಘಟಕಗಳಿಂದ ಎ.ಎಸ್.ಪೊನ್ನಣ್ಣ ಅವರ ಹೆಸರಿನಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಮಡಿಕೇರಿ ನಗರ ಕಾಂಗ್ರೆಸ್ ಖಂಡನೆ
ಮಡಿಕೇರಿ: ವೀರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮಂದಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆಯ ಜನಪ್ರಿಯ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿರುವುದು ಖಂಡನೀಯವೆAದು ಮಡಿಕೇರಿ
ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುದ್ಧ ರಾಜಕಾರಣಕ್ಕೆ ಹೆಸರಾಗಿರುವ ಕೊಡಗಿನ ಘನತೆಗೆ ಬಿಜೆಪಿ ಚ್ಯುತಿ ತಂದಿದೆ. ಎ.ಎಸ್.ಪೊನ್ನಣ್ಣ ಅವರ ಜನಪ್ರಿಯತೆಯನ್ನು ಸಹಿಸದೆ ಈ ರೀತಿಯ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಪೊನ್ನಣ್ಣ ಅವರಿಗೆ ರಾಜ್ಯ ಮಟ್ಟದಲ್ಲಿ ಘನತೆ, ಗೌರವವಿದೆ. ವೀರಾಜಪೇಟೆ ಕ್ಷೇತ್ರದಲ್ಲಿ ಜನಪ್ರಿಯತೆ ಇದೆ. ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಮಂದಿ ವಿನಾಕಾರಣ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.(ಮೊದಲ ಪುಟದಿಂದ) ವೀರಾಜಪೇಟೆ ಕ್ಷೇತ್ರದ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣನವರ ಭಾವಚಿತ್ರವಿಟ್ಟು ಅಣಕು ಶವಯಾತ್ರೆ ಮಾಡಿ ಸುಟ್ಟಿರುವ ಘಟನೆ ಖಂಡಿಸಿರುವ ಅವರು, ಬೆಲೆ ಏರಿಕೆ ವಿಚಾರದಲ್ಲಿ ಬಿಜೆಪಿ ಪಕ್ಷವು ಕಾಂಗ್ರೆಸ್ ಪಕ್ಷದ ವಿರುದ್ದ ಮಾತನಾಡುವ ನೈತಿಕತೆಯನ್ನು ಕಳೆದುಕೊಂಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಹಾಗೂ ಡೀಸಲ್ ಬೆಲೆ ೧೦೦ರ ಗಡಿ ದಾಟಿರುವುದು ಇವರು ಮರೆತಂತಿದೆ ಎಂದಿದ್ದಾರೆ.
ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣನವರ ಜನಪ್ರಿಯತೆಯನ್ನು ಅರಗಿಸಿಕೊಳ್ಳದ ಬಿಜೆಪಿಗರು ಅಣಕು ಶವಯಾತ್ರೆ ಮಾಡಿರುವುದು ಸರಿಯಲ್ಲ. ಪ್ರತಿಭಟನೆಯಲ್ಲಿ ಸ್ವತಃ ವಿಧಾನ ಪರಿಷತ್ತಿನ ಸದಸ್ಯ ಮಂಡೇಪAಡ ಸುಜಾಕುಶಾಲಪ್ಪನವರ ಸಮ್ಮುಖದಲ್ಲಿ ನಡೆದಿದ್ದು, ಇದನ್ನು ಸುಜಾಕುಶಾಲಪ್ಪ ಅವರು ವಿರೋಧಿಸಬಹುದಾಗಿತ್ತು ಕೊಡಗಿನ ಹಲವು ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣನವರೊಂದಿಗೆ ವೇದಿಕೆಗಳನ್ನು ಹಂಚಿಕೊAಡಿರುವ ಇವರಿಗೆ ಶಾಸಕ ಪೊನ್ನಣ್ಣ ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ದಿ ಕೆಲಸಗಳ ಬಗ್ಗೆ ಅರಿವಿಲ್ಲವೆ? ಕಾಂಗ್ರೆಸ್ ಪಕ್ಷದ ರಾಷ್ಟç ನಾಯಕ ರಾಹುಲ್ ಗಾಂಧಿ,ಮುಖ್ಯಮAತ್ರಿಗಳಾದ ಸಿದ್ದರಾಮಯ್ಯ ಹಾಗೂ ಶಾಸಕ ಪೊನ್ನಣ್ಣನವರ ಅಣಕು ಶವಯಾತ್ರೆಯನ್ನು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದು ಪ್ರಶ್ನಿಸಿದ್ದಾರೆ.