ಮಡಿಕೇರಿ, ಜೂ. ೨೧: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆದ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ನಡೆದ ಅಕ್ರಮದ ಸಮಗ್ರ ತನಿಖೆಗೆ ಆಗ್ರಹಿಸಿ ಭಾರತೀಯ ರಾಷ್ಟಿçÃಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಇಂದಿರಾ ಗಾಂಧಿ ವೃತ್ತದಿಂದ ಆರಂಭಗೊAಡ ಪ್ರತಿಭಟನಾ ಮೆರವಣಿಗೆ ಅಜ್ಜಮಾಡ ದೇವಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಅಬ್ದುಲ್ ರಶೀದ್, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ. ಇಂತಹ ದೊಡ್ಡ ಹಗರಣ ನಡೆದಿರುವುದು ದೇಶದ ಇತಿಹಾಸದಲ್ಲೇ ಇದೇ ಮೊದಲು. ಹೀಗಿದ್ದರೂ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ಮೌನವಹಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಅಕ್ರಮದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಅವರ ಪ್ರತಿಕೃತಿಯನ್ನು ದಹಿಸಿರುವುದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಅಬ್ದುಲ್ ರಾಶೀದ್ ಹೇಳಿದರು.

ಮನವಿ ಪತ್ರವನ್ನು ಜಿಲ್ಲಾಡಳಿತ ಮೂಲಕ ರಾಷ್ಟçಪತಿಗೆ ಕಳುಹಿಸಲಾಯಿತು. ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎಂ ಪ್ರತಾಪ್, ಮೊಹಮ್ಮದ್ ಮಿದಲಾಜೆ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ. ಶರಣ್, ನಗರಾಧ್ಯಕ್ಷ ಅರ್ಜುನ್ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.