ಕೂಡಿಗೆ, ಜೂ. ೨೨: ಶಿಕ್ಷಕರು ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಉತ್ತಮ ಪರಿಸರ ಸಂರಕ್ಷಕರಾಗಿ ರೂಪಿಸು ವಲ್ಲಿ ವಿಶೇಷ ಗಮನ ಹರಿಸಬೇಕು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಸಲಹೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಘಟಕ ಹಾಗೂ ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.) ವತಿಯಿಂದ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ-೨೦೨೪ ರ ಪರಿಸರ ಸಂಭ್ರಮಾಚರಣೆಯಲ್ಲಿ ಗಿಡ ನೆಟ್ಟು ಮಾತನಾಡಿದರು. ಅರಣ್ಯ ಮತ್ತು ಪರಿಸರ ಸಂರಕ್ಷಣೆ ನೆಮ್ಮೆಲ್ಲರ ಕರ್ತವ್ಯವಾಗಿದೆ. ಹಣ ಆಸ್ತಿಗಳಿಕೆಗಿಂತಲೂ ಉತ್ತಮ ಪರಿಸರ ಮನುಕುಲದ ಸಂಪತ್ತು. ಮಾನವ ಪ್ರಕೃತಿ ಒಂದು ಅವಿಭಾಜ್ಯ ಅಂಗ. ಪ್ರಕೃತಿ ಉಳಿದರೆ ಮಾತ್ರ ಮಾನವನ ಉಳಿವು ಸಾಧ್ಯವಾಗುತ್ತಿದೆ. ಪ್ರಕೃತಿ ಮತ್ತು ಮನುಷ್ಯ ಒಂದೇ ನಾಣ್ಯದ ಎರಡು ಮುಖಗಳಂತೆ. ಮಾನವ ಇಲ್ಲದಿದ್ದರೂ ಪ್ರಕೃತಿ ಇರುತ್ತದೆ. ಪ್ರಕೃತಿ ಬಿಟ್ಟು ಮಾನವನ ಉಳಿವು ಅಸಾಧ್ಯ. ಆದ್ದರಿಂದ ನಾವು ನಮ್ಮ ಸುತ್ತಮುತ್ತಲಿನ ಪರಿಸರ ವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದರು.

ಶಾಲೆಯ ಉಪ ಪ್ರಾಂಶುಪಾಲ ವೈ.ಜೆ. ಪರಮೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತ ನಾಡಿದರು. ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಕಾಳನಾಯಕ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ಕೋಶಾಧಿಕಾರಿ ಎ.ಸಿ. ಮಂಜುನಾಥ್, ಕ್ಷೇತ್ರ ಸಮನ್ವಯಾಧಿಕಾರಿ ಜಿ.ಎಂ. ಹೇಮಂತ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಬಿ.ಎನ್. ಪುಷ್ಪ, ಎಂ.ವಿ. ಮಂಜೇಶ್, ಬಾಲಕೃಷ್ಣ, ಪಾಲಾಕ್ಷ, ಬಸವರಾಜಪ್ಪ, ತಳವಾರ್, ಸೋಮಯ್ಯ, ಹೆಚ್.ಬಿ. ಮೂರ್ತಿ, ಬಿ.ಆರ್.ಪಿ. ಎಸ್.ಎಸ್. ಶಿವಕುಮಾರ್, ಇಸಿಓ ಶೇಖರ್, ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಬಿ.ಪಿ. ಕಮಲಮ್ಮ ಹಾಗೂ ತಾಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.