ವೀರಾಜಪೇಟೆ, ಜೂ. ೨೨: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ನಿರ್ವಹಣಾ ಶಾಸ್ತç ವಿಭಾಗದ ವತಿಯಿಂದ ಸಿಎಸ್‌ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಎಂಬ ವಿಷಯಕ್ಕೆ ಸಂಬAಧಿಸಿದAತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೇಣುಗೋಪಾಲ್ ಹೆಚ್.ಎಸ್ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿರ್ವಹಣಾ ಶಾಸ್ತç ವಿಭಾಗದ ಮುಖಸ್ಥರಾದ ಮಂಜುನಾಥ ಆರ್. ಮಾತನಾಡಿ ವಿದ್ಯಾರ್ಥಿಗಳು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವ ಸಾಮಾಜಿಕ ಜವಾಬ್ದಾರಿಯನ್ನು ಬೆಳಿಸಿಕೊಳ್ಳಬೇಕೆಂದರು.

ಸAಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಂತ ಅನ್ನಮ್ಮ ಕಾಲೇಜಿನ ಐಕ್ಯೂಎಸಿ ಸಂಚಾಲಕರು ಹಾಗೂ ಸಹಾಯಕ ಪ್ರಾಧ್ಯಾಪಕಿ ಹೇಮಾ ಬಿ.ಡಿ. ಮಾತನಾಡಿದರು. ಅಂತಿಮ ಬಿಬಿಎ ವಿದ್ಯಾರ್ಥಿನಿ ಶೃತಿಕಾ ಕಾರ್ಯಕ್ರಮ ನಿರ್ವಹಿಸಿದರು. ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಕಾರ್ಯಪ್ಪ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.