ಮಡಿಕೇರಿ, ಜೂ. ೨೨: ಸಿದ್ದಾಪುರದ ಬಿ.ಬಿ.ಟಿ.ಸಿ. ಸಂಸ್ಥೆಯ ಸುಮಾರು ೨೪೦೦ ಎಕರೆ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂ ವಿಲೇವಾರಿ ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ತಾ. ೨೪ ರಂದು ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.

ಸಿ.ಎನ್.ಸಿ. ವತಿಯಿಂದ ಸೋಮವಾರ ಬೆಳಿಗ್ಗೆ ೧೦.೩೦ ಗಂಟೆಗೆ ಶಾಂತಿಯುತ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್‌ನ ರಕ್ಷಣೆಗಾಗಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.