ಎ.ಡಿ.ಸಿ. ಬಿ.ಎನ್. ವೀಣಾ
ಮಡಿಕೇರಿ, ಜೂ. ೨೨: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾರ್ಯಕ್ರಮಗಳ ಯೋಜನೆ ಸಂಬAಧಿಸಿದAತೆ ಮಾಹಿತಿ ಪಡೆದು ಅವರು ಮಾತನಾಡಿದರು.
ಕಳೆದ ಬಾರಿ ವಿವಿಧ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಂಬAಧಿಸಿದAತೆ ಮಾಹಿತಿ ಪಡೆದರು. ಕಳೆದ ವರ್ಷ ಶೇಕಡಾವಾರು ಪ್ರಗತಿ ಸಾಧಿಸಲಾಗಿದ್ದು, ಈ ಬಾರಿಯೂ ಸಹ ಆರಂಭದಿAದಲೇ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು.
ಸರ್ಕಾರ ನಿಗದಿ ಮಾಡಿರುವ ಗುರಿಯನ್ನು ತಲುಪಬೇಕು. ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿ.ಪಂ. ಉಪಕಾರ್ಯದರ್ಶಿ ಎಸ್. ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್. ಹೊನ್ನೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ವಿಶಾಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ. ಚಂದ್ರಕಾAತ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಅರಣ್ಯ ಇಲಾಖೆಯ ಭಾಷಾ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಪೌರಾಯುಕ್ತ ವಿಜಯ್, ಮುಖ್ಯಾಧಿಕಾರಿಗಳಾದ ಚಂದ್ರಕುಮಾರ್, ಕೃಷ್ಣಪ್ರಸಾದ್, ನಾಚಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ, ವಿಕಲಚೇತನರ ಅಧಿಕಾರಿ ವಿಮಲ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ರೇಖಾ, ಪ್ರವಾಸೋದ್ಯಮ ಇಲಾಖೆಯ ಜತಿನ್ ಇತರರು ತಮ್ಮ ಇಲಾಖೆಗೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.