ಕುಶಾಲನಗರ, ಜೂ. ೨೨: ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹೆಬ್ಬಾಲೆ ಸಮೀಪದ ಗದ್ದೆಹೊಸಳ್ಳಿ ಗ್ರಾಮದ ರಸ್ತೆ ಬಳಿ ಇರುವ ಎಂ.ಎಸ್.ಐ.ಎಲ್. ಮದ್ಯದಂಗಡಿಗೆ ರಾತ್ರಿ ಸಮಯದಲ್ಲಿ ಕಳ್ಳನೋರ್ವ ನುಗ್ಗಿ ಲಕ್ಷಾಂತರ ಮೌಲ್ಯದ ಮದ್ಯ ಬಾಟಲಿಗಳು ಮತ್ತು ಸಾವಿರಾರು ರೂಪಾಯಿ ನಗದನ್ನು ದೋಚಿರುವ ಘಟನೆ ನಡೆದಿದೆ.
ಮುಖಕ್ಕೆ ಬಟ್ಟೆ ಕಟ್ಟಿಕೊಂಡು ನುಗಿದ ಕಳ್ಳ ಅಂಗಡಿಯಲ್ಲಿದ್ದ ರೂ. ೪೦ ಸಾವಿರ ನಗದು ಮತ್ತು ಲಕ್ಷಾಂತರ ಮೌಲ್ಯದ ವಿವಿಧ ಬೆಲೆಬಾಳುವ ಮದ್ಯ ಬಾಟಲಿಗಳನ್ನು ಕಳುವು ಮಾಡಿರುವುದಾಗಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಗಡಿಯ ಮುಂಭಾಗದ ಬಾಗಿಲು ಒಡೆದು ನುಗ್ಗಿದ ಕಳ್ಳ ಸಿಸಿ ಕ್ಯಾಮರದ ಹಾರ್ಡ್ ಡಿಸ್ಕ್ ಕೂಡ ಕಳವು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಧಾವಿಸಿದ್ದು ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.