ಕೂಡಿಗೆ, ಜೂ. ೨೨: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ರೂ. ೧೦.೪೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕರ ಹೈಟೆಕ್ ಶೌಚಾಲಯ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಶೌಚಾಲಯ ಕಾಮಗಾರಿಯನ್ನು ಉತ್ತಮ ಗುಣಮಟ್ಟದಿಂದ ನಡೆಸಬೇಕು. ಮುಂದಿನ ಎರಡು ತಿಂಗಳಲ್ಲಿ ಶೌಚಾಲಯ ಕಟ್ಟಡ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭ ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಸೋಮಶೇಖರ್, ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಸದಸ್ಯರಾದ ಫಿಲೋಮಿನಾ, ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಮುಖಂಡರಾದ ಟಿ.ಪಿ. ಹಮೀದ್, ಚಂದ್ರು ಹಾಗೂ ಪ್ರಾಂಶುಪಾಲ ಬಸಪ್ಪ ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.