ಭಾರತೀಯ ೧೮ ಮೀನುಗಾರರ ಬಂಧನ
ನವದೆಹಲಿ, ಜೂ. ೨೩: ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆ ಆರೋಪದ ಮೇಲೆ ೧೮ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಮೂರು ಮೀನುಗಾರಿಕಾ ಹಡಗುಗಳನ್ನು ಲಂಕಾ ನೌಕಪಡೆ ವಶಕ್ಕೆ ಪಡೆದುಕೊಂಡಿದೆ ಎಂದು ಮಾಧ್ಯಮ ವರದಿಯೊಂದು ಭಾನುವಾರ ತಿಳಿಸಿದೆ. ಶನಿವಾರ ರಾತ್ರಿ ಡೆಲ್ಫ್ ದ್ವೀಪಗಳ ಬಳಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉತ್ತರ ಸಮುದ್ರದಿಂದ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನ್ಯೂಸ್ ಪೋರ್ಟಲ್ ದಿ ನ್ಯೂಸ್ ಫಸ್ಟ್ ವರದಿ ಮಾಡಿದೆ. ಬಂಧಿತ ಮೀನುಗಾರರನ್ನು ಮುಂದಿನ ಕಾನೂನು ಕ್ರಮಗಳಿಗಾಗಿ ಕಂಕೆಸAತುರೈ ಮೀನುಗಾರಿಕಾ ಬಂದರಿಗೆ ಕರೆದೊಯ್ಯಲಾಗುವುದು ಎಂದು ನೌಕಾಪಡೆಯ ವಕ್ತಾರ ಕ್ಯಾಪ್ಟನ್ ಗಯಾನ್ ವಿಕ್ರಮಸೂರ್ಯ ತಿಳಿಸಿದ್ದಾರೆ. ಕಳೆದ ವಾರ, ದ್ವೀಪ ರಾಷ್ಟçದ ನೀರಿನಲ್ಲಿ ಬೇಟೆಯಾಡಿದ ಆರೋಪದ ಮೇಲೆ ನಾಲ್ವರು ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು. ಅವರ ಟ್ರಾಲರ್ನ್ನು ಶ್ರೀಲಂಕಾ ನೌಕಾಪಡೆ ವಶಪಡಿಸಿಕೊಂಡಿತ್ತು.
ನಿರ್ಮಾಣ ಹಂತದ ಸೇತುವೆ ಕುಸಿತ
ಮೋತಿಹಾರಿ, ಜೂ. ೨೩: ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆಗಳ ಕುಸಿತ ಪ್ರಕರಣ ಮುಂದುವರೆದಿದೆ. ಭಾನುವಾರ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಮತ್ತೊಂದು ಸೇತುವೆಯೊಂದು ಕುಸಿದು ಬಿದ್ದಿದೆ. ಇದು ಇದೇ ವಾರದೊಳಗೆ ಸಂಭವಿಸಿದ ಮೂರನೇ ಘಟನೆಯಾಗಿದೆ. ಮೋತಿಹಾರಿಯ ಘೋರಸಹಸ್ ಬ್ಲಾಕ್ನಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಂವಾ ಗ್ರಾಮ ಸೇರಿದಂತೆ ಇತರೆ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ರೂ. ೧.೫ ಕೋಟಿ ವೆಚ್ಚದಲ್ಲಿ ೧೬ ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಲಾಗುತಿತ್ತು. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇದು ಗಂಭೀರ ವಿಷಯವಾಗಿದ್ದು, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರ್ಡಬ್ಲ್ಯೂಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಸಿಂಗ್ ಹೇಳಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ಬೆಂಗಳೂರು, ಜೂ. ೨೩: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿಲಾಗಿದೆ. ತನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್, ಸೂರಜ್ ಅವರನ್ನು ಬಂಧಿಸಿ, ಶನಿವಾರ ರಾತ್ರಿ ೭.೩೦ ರ ಹೊತ್ತಿಗೆ ಹಾಸನದ ಸಿಇಎನ್ ಪೊಲೀಸ್ ಠಾಣೆಗೆ ಕರೆತಂದಿದ್ದರು. ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.
ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದÀಕರ ಹತ್ಯೆ
ಜಮ್ಮು, ಜೂ. ೨೩: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು ಕಾರ್ಯಾಚರಣೆ ಮುಂದುವರೆದಿದೆ. ಮೂಲಗಳ ಪ್ರಕಾರ, ಉತ್ತರ ಕಾಶ್ಮೀರದ ಉರಿ ಸೆಕ್ಟರ್ನ ಗೋಹ್ಲಾನ್ ಪ್ರದೇಶದಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಟುವಟಿಕೆಯನ್ನು ಸೇನಾ ಸಿಬ್ಬಂದಿ ಗಮನಿಸಿದ್ದಾರೆ. ಇದನ್ನು ಪ್ರಶ್ನಿಸಿದಾಗ, ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು. ಅದಕ್ಕೆ ಸೇನಾ ಸಿಬ್ಬಂದಿ ಕೂಡ ಪ್ರತ್ಯುತ್ತರ ನೀಡಿದರು. ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆಯ ವೇಳೆ, ಸೇನಾ ಸಿಬ್ಬಂದಿ ಅಪಾರ ಪ್ರಮಾಣದ ಶಸ್ತಾçಸ್ತç ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.ಇಬ್ಬರು ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಬಿದ್ದಿರುವ ಕಾರಣ ಅವರ ಮೃತದೇಹಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ ಎಂದು ಭದ್ರತಾ ಪಡೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶನಿವಾರ ಗಡಿ ನಿಯಂತ್ರಣ ರೇಖೆಯ ಬಳಿ ಬಾಸ್ಗ್ರೇನ್ ಗ್ರಾಮದ ಸುತ್ತಲೂ ನುಸುಳುಕೋರರ ಗುಂಪು ಕಾಣಿಸಿಕೊಂಡ ನಂತರ ಎನ್ಕೌಂಟರ್ ಪ್ರಾರಂಭವಾಯಿತು. ಆಪರೇಷನ್ ಬಜರಂಗ್ ಹೆಸರಲ್ಲಿ ಸೇನೆ ಕಾರ್ಯಾಚರಣೆ ನಡೆಸುತ್ತಿದೆ.
ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ಘೋಷಿಸಿದ ಮಾಯಾವತಿ
ನವದೆಹಲಿ, ಜೂ. ೨೩: ಬಹುಜನ ಸಮಾಜವಾದಿ ಪಕ್ಷದ ವರಿಷ್ಠೆ ಮಾಯಾವತಿ ಮತ್ತೊಮ್ಮೆ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ದು ಪಕ್ಷದ ರಾಷ್ಟಿçÃಯ ಸಂಚಾಲಕರನ್ನಾಗಿ ಮಾಡಲಾಗಿದೆ. ಆಕಾಶ್ ಆನಂದ್ ಶೀಘ್ರದಲ್ಲೇ ರಾಷ್ಟ್ರೀಯ ಕಾರ್ಯಕಾರಿಣಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ಬಹುಜನ ಸಮಾಜ ಪಕ್ಷದ ಬೃಹತ್ ಸಮಾವೇಶ ನಡೆಸಲಾಯಿತು. ಈ ಸಭೆಯಲ್ಲಿ ಬಿಎಸ್ಪಿ ವರಿಷ್ಠೆ ಮಾಯಾವತಿ, ಅವರ ಸೋದರಳಿಯ ಆಕಾಶ್ ಆನಂದ್ ಮತ್ತು ಅವರ ಸಹೋದರ ಆನಂದ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಆಕಾಶ್ ಆನಂದ್ ಅವರನ್ನು ಮತ್ತೊಮ್ಮೆ ಪಕ್ಷದ ರಾಷ್ಟಿçÃಯ ಸಂಯೋಜಕರನ್ನಾಗಿ ಮಾಡಲಾಯಿತು. ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಎಸ್ಪಿ ಪಾಲ್ಗೊಳ್ಳಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಸಭೆಗೆ ಆಗಮಿಸಿದ ಕೂಡಲೇ ಆಕಾಶ್ ಆನಂದ್ ಅವರು ಬಿಎಸ್ಪಿ ವರಿಷ್ಠೆ ಮತ್ತು ಅವರ ಚಿಕ್ಕಮ್ಮ ಮಾಯಾವತಿಯವರ ಪಾದ ಮುಟ್ಟಿ ಆಶೀರ್ವಾದ ಪಡೆದರು.
ಸ್ವಾಮೀಜಿ ಕೊಲೆ ಪ್ರಕರಣ - ಮೂವರ ಬಂಧನ
ಕೋಲಾರ, ಜೂ. ೨೩: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ. ಘಟನೆ ಸಂಬAಧ ಆಚಾರ್ಯ ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ ಹಾಗೂ ಅರುಣ್ ಕುಮಾರ್ ಎಂಬ ಮೂವರು ಆರೋಪಿಗಳನ್ನು ಮಾಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶನಿವಾರ ಬೆಳಿಗ್ಗೆ ಮಾಲೂರಿನ ಸಂತಳ್ಳಿ ಗೇಟ್ ಬಳಿಯ ಆಶ್ರಮದಲ್ಲಿ ಸ್ನಾನ ಮಾಡುತ್ತಿದ್ದ ಚಿನ್ಮಯಾನಂದ ಸ್ವಾಮೀಜಿ ಅವರನ್ನು ಹೊರಗೆ ಎಳೆದುಕೊಂಡು ಬಂದ ಆರೋಪಿಗಳು ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ವಾಮೀಜಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಸ್ವಾಮೀಜಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆಶ್ರಮ ಹಾಗೂ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭೇಟಿ ನೀಡಿ ಪರಿಶೀಲಿಸಿದರು.
ಪುಷ್ಪಕ್ ಸುರಕ್ಷಿತ ಲ್ಯಾಂಡಿAಗ್ ಮಾಡಿದ ಇಸ್ರೋ
ಚಿತ್ರದುರ್ಗ, ಜೂ. ೨೩: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISಖಔ) ಭಾನುವಾರ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ (ಖಐಗಿ) ಅಥವಾ ಪುಷ್ಪಕ್ ಲ್ಯಾಂಡಿAಗ್ ಪ್ರಯೋಗ(ಐಇಘಿ)ನಲ್ಲಿ ಸತತ ಮೂರನೇ ಯಶಸ್ಸನ್ನು ಸಾಧಿಸಿದೆ. ಐಇಘಿ (೦೩) ಸರಣಿಯ ಮೂರನೇ ಮತ್ತು ಅಂತಿಮ ಪರೀಕ್ಷೆಯನ್ನು ಬೆಳಿಗ್ಗೆ ೭.೧೦ಕ್ಕೆ ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ನಡೆಸಲಾಯಿತು ಎಂದು ಇಸ್ರೊ ಪ್ರಕಟಣೆ ತಿಳಿಸಿದೆ. ೧೫ ತಿಂಗಳ ಅವಧಿಯಲ್ಲಿ ಇಸ್ರೊ ತನ್ನ ಬಾಹ್ಯಾಕಾಶ ವಿಮಾನ ‘ಪುಷ್ಪಕ್'ನ ಎಲ್ಲಾ ಮೂರು ಸ್ವಾಯತ್ತ ಲ್ಯಾಂಡಿAಗ್ ಪರೀಕ್ಷೆಗಳನ್ನು ಪೂರ್ಣಗೊಳಿಸಿದೆ. ಇಂದು ಮೂರನೇ ಮತ್ತು ಅತ್ಯಂತ ಸಂಕೀರ್ಣವಾದ ಲ್ಯಾಂಡಿAಗ್ ಪರೀಕ್ಷೆಯನ್ನು ಪೂರ್ಣಗೊಳಿಸುವುದರೊಂದಿಗೆ, ಮಾರ್ಪಡಿಸಿದ ರಾಕೆಟ್ನಲ್ಲಿ ಬಾಹ್ಯಾಕಾಶಕ್ಕೆ ಈ ಬಾಹ್ಯಾಕಾಶ ವಿಮಾನದ ದೊಡ್ಡ ಆವೃತ್ತಿಯನ್ನು ಉಡಾವಣೆ ಮಾಡಲು, ಭೂಮಿಯ ಕಕ್ಷೆಯಲ್ಲಿ ವಿಮಾನವನ್ನು ಪರೀಕ್ಷಿಸಲು ಮತ್ತು ಅದರ ಸಾಮರ್ಥ್ಯವನ್ನು ಪ್ರದರ್ಶಿಸಲು ಇಸ್ರೋ ಈಗ ಕೆಲಸ ಮಾಡಬೇಕಾಗಿದೆ. ಮತ್ತೆ ವಾತಾವರಣಕ್ಕೆ ಪ್ರವೇಶಿಸಿ, ರನ್ವೇ ಲ್ಯಾಂಡಿAಗ್ಗೆ ಸುರಕ್ಷಿತವಾಗಿ ಭೂಮಿಗೆ ಹಿಂತಿರುಗುವAತೆ ವರದಿ ಮಾಡಿದೆ.