ಕೂಡಿಗೆ, ಜೂ. ೨೩ : ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ಸೇತುವೆಯ ನಿರ್ಮಾಣ ಸೇರಿದಂತೆ ಅಣೆಕಟ್ಟೆಯು ಭರ್ತಿಯಾದ ಸಂದರ್ಭದಲ್ಲಿ ಅಣೆಕಟ್ಟೆಯಿಂದ ನದಿಗೆ ನೀರು ಹರಿಯುವ ದೃಶ್ಯವನ್ನು ಪ್ರವಾಸಿಗರು ವೀಕ್ಷಿಸಲು ಅನುಕೂಲವಾಗುವಂತೆ ನೂತನ ತಂತ್ರಜ್ಞಾನದ ಸೇತುವೆಯನ್ನು ನಿರ್ಮಾಣ ಮಾಡಲು ಕಾವೇರಿ ನೀರಾವರಿ ನಿಗಮದ ಮೂಲಕ ರಾಜ್ಯ ನೀರಾವರಿ ಇಲಾಖೆಗೆ ೩೬.೫೦ ಕೋಟಿ ರೂ. ವೆಚ್ಚದ ಕಾಮಗಾರಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ರಾಜ್ಯ ನೀರಾವರಿ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಅನುದಾನವನ್ನು ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ಅಣೆಕಟ್ಟೆ ಭರ್ತಿಯಾದ ಸಂದರ್ಭದಲ್ಲಿ ಕುಶಾಲನಗರ-ಹಾರಂಗಿ ಮಾರ್ಗವಾಗಿ ಸೋಮವಾರಪೇಟೆಗೆ ಹೋಗುವ ರಸ್ತೆ ಬಂದ್ ಆಗುವುದು, ಅಲ್ಲದೆ, ಅಣೆಕಟ್ಟೆಯ ಸಮೀಪದಲ್ಲಿರುವ ೧೩ ಕ್ಕೂ ಹೆಚ್ಚು ಗ್ರಾಮಗಳಿಗೆ ಕುಶಾಲನಗರ ಕಡೆಗೆ ಬರಲು ತೊಂದರೆಗಳು ಅಗುತ್ತಿವೆ. ಇದಕ್ಕೆ ಸಂಬAಧಿಸಿದAತೆ ಈ ವ್ಯಾಪ್ತಿಯ ನೂರಾರು ಗ್ರಾಮಸ್ಥರು ಅನೇಕ ಬಾರಿ ಪತ್ರವ್ಯವಹಾರವನ್ನು ಇಲಾಖೆಯ ಮೂಲಕ ನಡೆಸಿದರೂ ಇದುವರೆಗೆ ಯಾವುದೇ ಪ್ರಕ್ರಿಯೆಗಳು ನಡೆದಿರುವುದಿಲ್ಲ. ಶಾಸಕ ಡಾ. ಮಂತರ್ ಗೌಡ ಅವರ ಸೂಚನೆಯ ಮೇರೆಗೆ ಹಾರಂಗಿ ನೀರಾವರಿ ಇಲಾಖೆಯ ಅಧಿಕಾರಿ ವರ್ಗದವರ ಕಾಮಗಾರಿಯ ಕ್ರಿಯಾಯೋಜನೆಯ ಅನುಗುಣವಾಗಿ ರಾಜ್ಯಮಟ್ಟದ ನೀರಾವರಿ ಇಲಾಖೆಗೆ, ಮತ್ತು ರಾಜ್ಯ ಕಾವೇರಿ ನಿಗಮಕ್ಕೆ ಪ್ರಸ್ತಾವನೆಯನ್ನು ನೀಡಿದ್ದಾರೆ.
ಇದರ ಹಿನ್ನೆಲೆಯಲ್ಲಿ ನೂತನ ತಂತ್ರಜ್ಞಾನದ ಸೇತುವೆ ನಿರ್ಮಾಣಕ್ಕೆ ಸಂಬAಧಿಸಿದAತೆ ವಿಷಯ ಪ್ರಸ್ತಾವನೆ ರಾಜ್ಯ ಮಟ್ಟದಲ್ಲಿ ನಡೆದಿದ್ದು, ಮುಂದಿನ ಯೋಜನೆಯ ಕ್ರಿಯಾ ಚಟುವಟಿಕೆಗಳು ಈಗಾಗಲೇ ಆರಂಭಗೊAಡಿವೆ ಎಂದು ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.
ಬಹುದಿನಗಳ ಬೇಡಿಕೆಯಾಗಿದ್ದ ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ನೂತನ ಸೇತುವೆಯ ನಿರ್ಮಾಣದ ಜೊತೆಯಲ್ಲಿ ಅಣೆಕಟ್ಟೆಯಿಂದ ನೀರು ಹರಿಯುವುದನ್ನು ವೀಕ್ಷಿಸಲು ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಹಾರಂಗಿ ಅಣೆಕಟ್ಟೆಯ ಅಭಿವೃದ್ಧಿ ಪೂರಕವಾದ ಯೋಜನೆಯನ್ನು ಹಮ್ಮಿಕೊಳ್ಳಲಾವಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ. - ಕೆ.ಕೆ. ನಾಗರಾಜಶೆಟ್ಟಿ