ಪರಿಸರ ಜಾಗೃತಿ ಆಂದೋಲನದ ಕುರಿತು ಮಾತನಾಡಿ ಪರಿಸರ ಪ್ರತಿಜ್ಞೆ ಬೋಧಿಸಿದ ರಾಷ್ಟಿçÃಯ ಹಸಿರು ಪಡೆಯ ಇಕೋ-ಕ್ಲಬ್ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಹೆಚ್ಚು ಸಸಿನೆಟ್ಟು ಬೆಳೆಸುವ ಮೂಲಕ ನೆಲ-ಜಲ ಸಂರಕ್ಷಣೆ, ಜೀವ-ವೈವಿಧ್ಯ ಹಾಗೂ ನೀರಿನ ಸಂರಕ್ಷಣೆಯAತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ದಿಸೆಯಲ್ಲಿ ಶಾಲೆಯಲ್ಲಿ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ದಿಸೆಯಲ್ಲಿ ಸಂಘಟಿತ ಪ್ರಯತ್ನ ಅಗತ್ಯ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಕರು ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದರು.
ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲ ಪಂಕಜಾಕ್ಷನ್, ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತೆಯೂ ಆಗಿರುವ ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ, ಜಿಲ್ಲಾ ಸ್ಕೌಟ್ಸ್ನ ಆಯುಕ್ತ ಜಿಮ್ಮಿ ಸಿಕ್ವೇರಾ, ಸ್ಥಾನೀಕ ಆಯುಕ್ತ ಎಚ್.ಆರ್. ಮುತ್ತಪ್ಪ, ಸಂಸ್ಥೆಯ ಬೊಳ್ಳಜಿರ ಬಿ. ಅಯ್ಯಪ್ಪ, ಗೈಡ್ಸ್ನ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನ, ಮಡಿಕೇರಿ ವಲಯದ ಡಿಆರ್ಎಫ್ಓ ಸುನಿಲ್ ಗುನಗಾ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಅಲೀಮ, ಉಷಾರಾಣಿ, ಶಿವಶಂಕರಪ್ಪ, ಟಿ.ಬಿ. ಕುಮಾರಸ್ವಾಮಿ, ಮೈಥಿಲಿರಾವ್, ಕೆ.ಯು. ರಂಜಿತ್, ವಾಮನ, ಸಿ.ಎಂ. ಸುಲೋಚನಾ, ಭೋಜಮ್ಮ, ವೀಣಾ, ಗಣೇಶ್, ಭೀಮಯ್ಯ, ಗ್ರಾ.ಪಂ. ಸದಸ್ಯ ಡೀನ್ ಬೋಪಣ್ಣ, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ. ಧನಂಜಯ, ಇತರರು ಇದ್ದರು. ಅರಣ್ಯ ಇಲಾಖೆಯ ಡಿಆರ್ಎಫ್ಓ ಸುನಿಲ್ ಗುನಗಾ, ಅರಣ್ಯ ವೀಕ್ಷಕರಾದ ವಾಸುದೇವ್, ಮಹೇಶ್, ರವಿ ಶಿಕ್ಷಕರೊಂದಿಗೆ ಜೊತೆಗೂಡಿ ೩೦ಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಸಹಕರಿಸಿದರು.
ಗುಂಡೂರಾವ್ ಹೇಳಿದರು.
ಸದ್ಯಕ್ಕೆ ಪಿ.ಜಿ. ಕೌನ್ಸಿಲಿಂಗ್ ಆಗಿರುವವರನ್ನು ಮುಂದಿನ ತಿಂಗಳಿನಿAದ ಕಡ್ಡಾಯ ಗ್ರಾಮೀಣ ಸೇವೆಯಡಿ ಖಾಲಿ ಹುದ್ದೆಗಳಿಗೆ ನೇಮಕ ಮಾಡುತ್ತೇವೆ. ಈ ಆಸ್ಪತ್ರೆಗೂ ನಿಯೋಜನೆ ಮಾಡುತ್ತೇವೆ. ಹೊರಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲು ಹೇಳಿದ್ದೇವೆ. ಈಗ ನೀಡುತ್ತಿರುವ ವೇತನವನ್ನು ಹೆಚ್ಚು ಮಾಡಲು ಚಿಂತಿಸಿದ್ದೇವೆ ಎಂದ ಸಚಿವರು, ಸೋಮವಾರಪೇಟೆಗೆ ವೈದ್ಯರುಗಳು ಬರಲು ಹಿಂದೇಟು ಹಾಕುತ್ತಿದ್ದಾರೆ. ಇದನ್ನು ಸರಿಪಡಿಸುತ್ತೇವೆ ಎಂದರು.
ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ಮೇಲ್ದರ್ಜೆಗೇರಿಸಲಾಗುವುದು. ಸರ್ಕಾರ ನೀಡುವ ಎಬಿಆರ್ಕೆ ಫಂಡ್ನಡಿ ಇತರ ವ್ಯವಸ್ಥೆಗಳಿಗೆ ಅನುದಾನ ನೀಡಲಾಗುವುದು. ಸ್ವಚ್ಛತೆ ಮತ್ತು ಕಾವಲುಗಾರರ ನೇಮಕವನ್ನು ಏಜೆನ್ಸಿ ಮೂಲಕ ನೇಮಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಆಸ್ಪತ್ರೆಯ ಅಭಿವೃದ್ಧಿ ಹಾಗೂ ಜನರ ವೈದ್ಯಕೀಯ ಸೇವೆಗಾಗಿ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಪ್ರಸ್ತುತ ಡಯಾಲಿಸೀಸ್ ಘಟಕ ಸುಧಾರಣೆಯಾಗಿದೆ. ಬೇಡಿಕೆಯಿದ್ದರೆ ಹೊಸ ಯಂತ್ರ ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಬೇಕಾದ ಔಷಧಿಗಳು ಪೂರೈಕೆಯಾಗುತ್ತಿದೆ. ಈಗಾಗಲೇ ಶೇ. ೮೦ ರಷ್ಟು ಪೂರೈಕೆಯಾಗಿದೆ. ಮುಂದಿನ ಮೂರು ತಿಂಗಳಲ್ಲಿ ಶೇ.೧೦೦ ಔಷಧಿಗಳ ಪೂರೈಕೆ ಆಗುತ್ತದೆ. ಪ್ರಯೋಗಾಲಯ ಪರೀಕ್ಷೆಗಳ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್, ತಾಲೂಕು ಆರೋಗ್ಯಾಧಿಕಾರಿ ಇಂದೂಧರ್, ಡಾ. ಕಿರಣ್, ಡಾ. ಮಂಜುಳಾ, ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಮೀನಾಕ್ಷಿ ಸೇರಿದಂತೆ ಸಿಬ್ಬಂದಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.