ನಾಪೋಕ್ಲು, ಜೂ. ೨೪: ಪ್ರತಿಕೃತಿ ದಹನ, ಅಣಕು ಶವಯಾತ್ರೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಿದ್ದು ಇದೀಗ ಶಾಸಕ ಪೊನ್ನಣ್ಣ ಅವರ ಆಯುಷ್ಯ, ಆರೋಗ್ಯ ವೃದ್ಧಿಗೆ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸುತ್ತಿದ್ದಾರೆ.
ಭಾಗಮಂಡಲದಲ್ಲಿ ಪೂಜೆ : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಕೆ. ಎ. ಇಸ್ಮಾಯಿಲ್ ಮುಂದಾಳತ್ವದಲ್ಲಿ ವಿಶೇಷ ಪೂಜೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗೆ ನೆರವಂಡ ಉಮೇಶ್ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಬಳಿಕ ನೆರೆದಿದ್ದವರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭ ಭಾಗಮಂಡಲ ವಲಯ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಡಿಸಿಸಿ ಸದಸ್ಯ ಸುನಿಲ್, ಅಕ್ರಮ ಸಕ್ರಮ ಸಮಿತಿ ಮಡಿಕೇರಿ ತಾಲೂಕು ಅಧ್ಯಕ್ಷ ನೆರವಂಡ ಉಮೇಶ್, ನಾಪೋಕ್ಲು ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ. ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ ಬೇಬ, ಭಾಗಮಂಡಲ ಮಾಜಿ ವಲಯ ಅಧ್ಯಕ್ಷ ದೇವಂಗೋಡಿ ಹರ್ಷ, ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿನೋದ್ ಕೋಡಿರ, ಚೇರಂಬಾಣೆ ಗ್ರಾಮ ಪಂಚಾಯಿತಿ ಸದಸ್ಯೆ ಬಿಂದು, ಕೊಟ್ಟುಕತ್ತಿರ ದಿವ್ಯ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.
ಪಾಡಿಯಲ್ಲಿ : ಕಕ್ಕಬೆ ವಲಯ ಕಾಂಗ್ರೆಸ್ ವತಿಯಿಂದ ಕಕ್ಕಬೆ ಶ್ರೀ ಪಾಡಿ ಇಗ್ಗುತಪ್ಪ ದೇವಸ್ಥಾನದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ಆಯುಷ್ಯ, ಆರೋಗ್ಯ ವೃದ್ಧಿಗೆ ಮತ್ತು ಯಶಸ್ಸನ್ನು ಕೋರಿ ವಿಶೇಷ ಪ್ರಾರ್ಥನೆ, ಪೂಜೆ ನೆರವೇರಿಸಲಾಯಿತು.
ಈ ಸಂದರ್ಭ ಡಿಸಿಸಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕಲಿಯಂಡ ಸಂಪನ್ ಅಯ್ಯಪ್ಪ, ಬಾಚಮಂಡ ರಾಜ ಪೂವಣ್ಣ, ಉದಿಯಂಡ ಸುಭಾಷ್, ಪೊನ್ನೋಲ್ತಂಡ ರಘು ಚಿನ್ನಪ್ಪ, ಬಾಚಮಂಡ ಭರತ್, ಬಡಕಡ ದೀನ ಪೂವಯ್ಯ, ಪೊಂಗೆರ ಉಲ್ಲಾಸ್, ಚೊವಂಡ ಜೋಯಪ್ಪ, ಇತರರು ಉಪಸ್ಥಿತರಿದ್ದರು.