ಸಿದ್ದಾಪುರ, ಜೂ. ೨೪: ಗಾಂಜಾ ಸೇವಿಸುತ್ತಿದ್ದ ನಾಲ್ವರು ಯುವಕರನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.

ಪಾಲಿಬೆಟ್ಟದ ನಿವಾಸಿಗಳಾದ ಹೆಚ್. ಕಾಮೇಶ್ (೨೧), ತರುಣ್ (೨೨), ಎಂ.ಕೆ. ಶಮಿಲ್ (೨೧), ಶರಣ್ (೨೧) ಬಂಧಿತ ಆರೋಪಿಗಳು.

ಮಾಲ್ದಾರೆ ಬಸ್ ತಂಗುದಾಣದಲ್ಲಿ ನಾಲ್ವರು ಯುವಕರು ಮದ್ಯ ಸೇವಿಸಿ ಗಲಾಟೆ ಮಾಡುತ್ತಿರುವ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ಯುವಕರನ್ನು ವಿಚಾರಿಸಿದ ಸಂದರ್ಭದಲ್ಲಿ ಗಾಂಜಾ ಸೇವನೆ ಮಾಡಿರುವುದಾಗಿ ಕಂಡುಬAದಿದೆ. ಯುವಕರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ನಂತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಸಂದÀರ್ಭದಲ್ಲಿ ಯುವಕರು ಗಾಂಜಾ ಸೇವನೆ ಮಾಡಿರುವುದು ವರದಿಯಿಂದ ದೃಢಪಟ್ಟಿದೆ. ಮಾದಕ ವಸ್ತು ಸೇವನೆ ಆರೋಪದಲ್ಲಿ ನಾಲ್ವರ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.