ಮಡಿಕೇರಿ, ಜೂ. ೨೪: ಜಿಲ್ಲೆಯ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ, ಸೋಮವಾರಪೇಟೆ ತಾಲೂಕು ಆಸ್ಪತ್ರೆಗೆ ತಲಾ ರೂ. ೧.೭೫ ಕೋಟಿ ಮತ್ತು ವೀರಾಜಪೇಟೆ ತಾಲೂಕು ಆಸ್ಪತ್ರೆಗೆ ರೂ. ೨ ಕೋಟಿ ಸೇರಿದಂತೆ ಸುಮಾರು ರೂ. ೫ ಕೋಟಿ ಹಣವನ್ನು ಆಸ್ಪತ್ರೆಗಳ ಅಭಿವೃದ್ಧಿಗೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಆರೋಗ್ಯ ಅಭಿಯಾನ ವತಿಯಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಆರಂಭಿಸಲಾಗಿರುವ ‘ಡಯಾಲಿಸಿಸ್ ಘಟಕ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ೨೧೯ ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು ೮೦೦ ಯಂತ್ರಗಳನ್ನು ಅಳವಡಿಸ ಲಾಗಿದೆ. ಹೊಸ ತಾಲೂಕು ಕೇಂದ್ರ ಗಳಲ್ಲಿಯೂ ಸಹ ಆರೋಗ್ಯಕ್ಕೆ ಸಂಬAಧಿಸಿದAತೆ ಹೊಸ ಹೊಸ ಪ್ರಯೋಗಗಳನ್ನು ಮಾಡಿ ಸುಲಭವಾಗಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ. ಈಗಾಗಲೇ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ೩ ಡಯಾಲಿಸಿಸ್ ಯಂತ್ರವನ್ನು ಅಳವಡಿಸಲಾಗಿದ್ದು, ಇನ್ನು ಒಂದು ಅಳವಡಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ವೈದ್ಯರು - ಸಿಬ್ಬಂದಿ ಕೊರತೆ ಪರಿಹಾರ

ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಸಕ್ತ ಬಜೆಟ್‌ನಲ್ಲಿ ಸೇರ್ಪಡೆ ಮಾಡಲು ಪ್ರಯತ್ನಿಸಲಾಗುವುದು. ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಇದ್ದು, ವೈದ್ಯರು, ಸಿಬ್ಬಂದಿ ನಿಯೋಜಿಸಲು ಹಂತ ಹಂತವಾಗಿ ಕ್ರಮವಹಿಸಲಾಗುವುದು. ಗುತ್ತಿಗೆ ಆಧಾರದಲ್ಲಿಯೂ ಸಹ ನೇಮಕ ಮಾಡಿಕೊಳ್ಳಲು ಮುಂದಾಗ ಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ಒದಗಿಸಬೇಕು. ಆ ನಿಟ್ಟಿನಲ್ಲಿ ಔಷಧಿಗಳು ಸೇರಿದಂತೆ ಶೇ.೧೦೦ ರಷ್ಟು ಔಷಧಿಗಳು ದೊರೆಯುವಂತಾಗಲು ಪ್ರಯತ್ನಿಸ ಲಾಗಿದೆ. ಇನ್ನು ಮೂರು ನಾಲ್ಕು ತಿಂಗಳಲ್ಲಿ ಶೇ.೧೦೦ ರಷ್ಟು ಗುರಿ ತಲುಪಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಇರುವ ವೈದ್ಯರು ಮತ್ತು ಸಿಬ್ಬಂದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ರೋಗಿಗಳಿಗೆ ಉಪಚರಿಸುವುದು,

(ಮೊದಲ ಪುಟದಿಂದ) ಅಗತ್ಯ ಆರೋಗ್ಯ ಸೇವೆ ಕಲ್ಪಿಸುವುದು ಅತೀ ಮುಖ್ಯವಾಗಿದೆ ಎಂದು ಕರೆ ನೀಡಿದ ಸಚಿವರು, ವೈದ್ಯರು ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು. ಕಳೆದ ಐದು ಆರು ವರ್ಷಗಳಿಂದ ಯಾವುದೇ ಹುದ್ದೆಗಳು ನೇಮಕಾತಿ ನಡೆದಿಲ್ಲ. ಆದ್ದರಿಂದ ವೈದ್ಯರು, ಶುಶ್ರೂಷಕರು ಮತ್ತು ತಂತ್ರಜ್ಞರ ನೇಮಕಾತಿ ಮಾಡಲಾಗುವುದು ಎಂದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ರಕ್ತದೊತ್ತಡ ಹಾಗೂ ಮಧುಮೇಹ ಮತ್ತಿತರ ರೋಗಗಳಿಗೆ ಡಯಾಲಿಸಿಸ್ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕ ಆರಂಭಿಸುವ ಮೂಲಕ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ, ಎಲ್ಲರಿಗೂ ಎಲ್ಲೆಡೆ ಆರೋಗ್ಯ ಸೇವೆ ಕಲ್ಪಿಸಲು, ಡಯಾಲಿಸಿಸ್ ಘಟಕವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿಯೂ ಆರಂಭಿಸುವAತಾಗಬೇಕು ಎಂದು ಮನವಿ ಮಾಡಿದರು.

ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಕೊಡಗು ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಹೆಚ್ಚಿನ ವೇತನ ನೀಡುವಂತಾಗಬೇಕು ಎಂದು ಗಮನ ಸೆಳೆದ ಮಂತರ್, ಕೂಡಿಗೆ ಕೈಗಾರಿಕಾ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ಹೆಸರು ಇಡಲು ಚಿಂತಿಸಲಾಗಿದ್ದು, ಗುಂಡೂರಾವ್ ಅವರ ಹೆಸರು ಕುಶಾಲನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ಶಾಶ್ವತವಾಗಿ ಉಳಿಯಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು. ಹೆಬ್ಬಾಲೆ ಮತ್ತು ಸುಂಟಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಅವಕಾಶ ಮಾಡುವಂತೆ ಕೋರಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ತಜ್ಞವೈದ್ಯರು ಕೆಲಸ ನಿರ್ವಹಿಸಲು ಆಸಕ್ತಿ ತೋರಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲೂಕು ಅನುಷ್ಠಾನ ಅಧ್ಯಕ್ಷÀ ವಿ.ಪಿ.ಶಶಿಧರ್ ಮಾತನಾಡಿ, ಡಯಾಲಿಸಿಸ್ ಘಟಕ ಆರಂಭಿಸಿ ಬಹಳ ದಿನಗಳ ಬೇಡಿಕೆ ಈಡೇರಿದೆ. ಕುಶಾಲನಗರ ತಾಲೂಕು ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಚಂದ್ರಮೌಳಿ, ಮಂಜುನಾಥ್, ಕೆಡಿಪಿ ಸಭೆಯ ಸದಸ್ಯೆ ಸುನಿತಾ, ತಹಶೀಲ್ದಾರ್ ಕಿರಣ್ ಗೌರಯ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕ ಡಾ.ಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳು ಇತರರು ಇದ್ದರು.