ಮಡಿಕೇರಿ, ಜೂ. ೨೪: ಉತ್ತಮ ಪರಿಸರ ಸಂರಕ್ಷಣೆ ಹಾಗೂ ಜೀವ ಸಂಕುಲದ ಉಳಿವಿಗೆ ಬೇಕಾದ ಶುದ್ಧ ಆಮ್ಲಜನಕ ಒದಗಿಸಿ ಪರಿಸರ ಸಮತೋಲನ ಕಾಪಾಡಿಕೊಂಡು ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದರು.
ಮಡಿಕೇರಿ ತಾಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮೂಲ ತರಬೇತಿ ಹಾಗೂ ಮುಂದುವರಿದ ತರಬೇತಿಯ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಅರಣ್ಯ ಇಲಾಖೆಯ ಮಡಿಕೇರಿ ವಲಯ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪರಿಸರ ಸಂಭ್ರಮ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಅರಣ್ಯ ಸಸಿ ನೆಡುವ ಮೂಲಕ ವನ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೊಡಗಿನಲ್ಲಿ ಉತ್ತಮ ಮಳೆ ಬಿದ್ದು ಜೀವನದಿ ಕಾವೇರಿ ತುಂಬಿ ಹರಿದರೆ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ನಾಡಿನ ಜನತೆಯ ನೀರಿನ ಬವಣೆ ಪರಿಹಾರ ಸಾಧ್ಯ. ಈ ದಿಸೆಯಲ್ಲಿ ಉತ್ತಮ ಮಳೆ ಪಡೆಯುವ ಸಲುವಾಗಿ ನಾವು ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಕೊಡಗಿನ ಅರಣ್ಯ, ಪರಿಸರ ಹಾಗೂ ಕಾವೇರಿ ನದಿಯನ್ನು ಸಂರಕ್ಷಿಸುವ ಮೂಲಕ ಇಡೀ ಜೀವ ಸಂಕುಲವನ್ನು ಸಂರಕ್ಷಿಸಬೇಕಿದೆ ಎಂದರು.
ಪರಿಸರ ಜಾಗೃತಿ ಆಂದೋಲನದ ಕುರಿತು ಮಾತನಾಡಿ ಪರಿಸರ ಪ್ರತಿಜ್ಞೆ ಬೋಧಿಸಿದ ರಾಷ್ಟಿçÃಯ ಹಸಿರು ಪಡೆಯ ಇಕೋ-ಕ್ಲಬ್ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಹೆಚ್ಚು ಸಸಿನೆಟ್ಟು ಬೆಳೆಸುವ ಮೂಲಕ ನೆಲ-ಜಲ ಸಂರಕ್ಷಣೆ, ಜೀವ-ವೈವಿಧ್ಯ ಹಾಗೂ ನೀರಿನ ಸಂರಕ್ಷಣೆಯAತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ದಿಸೆಯಲ್ಲಿ ಶಾಲೆಯಲ್ಲಿ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ದಿಸೆಯಲ್ಲಿ ಸಂಘಟಿತ ಪ್ರಯತ್ನ ಅಗತ್ಯ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಕರು ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದರು.
ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲ ಪಂಕಜಾಕ್ಷನ್, ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತೆಯೂ ಆಗಿರುವ ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ, ಜಿಲ್ಲಾ ಸ್ಕೌಟ್ಸ್ನ ಆಯುಕ್ತ ಜಿಮ್ಮಿ ಸಿಕ್ವೇರಾ, ಸ್ಥಾನೀಕ ಆಯುಕ್ತ ಎಚ್.ಆರ್. ಮುತ್ತಪ್ಪ, ಸಂಸ್ಥೆಯ ಬೊಳ್ಳಜಿರ ಬಿ. ಅಯ್ಯಪ್ಪ, ಗೈಡ್ಸ್ನ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನ, ಮಡಿಕೇರಿ ವಲಯದ ಡಿಆರ್ಎಫ್ಓ ಸುನಿಲ್ ಗುನಗಾ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಅಲೀಮ, ಉಷಾರಾಣಿ, ಶಿವಶಂಕರಪ್ಪ, ಟಿ.ಬಿ. ಕುಮಾರಸ್ವಾಮಿ, ಮೈಥಿಲಿರಾವ್, ಕೆ.ಯು. ರಂಜಿತ್, ವಾಮನ, ಸಿ.ಎಂ. ಸುಲೋಚನಾ, ಭೋಜಮ್ಮ, ವೀಣಾ, ಗಣೇಶ್, ಭೀಮಯ್ಯ, ಗ್ರಾ.ಪಂ. ಸದಸ್ಯ ಡೀನ್ ಬೋಪಣ್ಣ, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ. ಧನಂಜಯ, ಇತರರು ಇದ್ದರು. ಅರಣ್ಯ ಇಲಾಖೆಯ ಡಿಆರ್ಎಫ್ಓ ಸುನಿಲ್ ಗುನಗಾ, ಅರಣ್ಯ ವೀಕ್ಷಕರಾದ ವಾಸುದೇವ್, ಮಹೇಶ್, ರವಿ ಶಿಕ್ಷಕರೊಂದಿಗೆ ಜೊತೆಗೂಡಿ ೩೦ಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಸಹಕರಿಸಿದರು.