ಕುಶಾಲನಗರ, ಜೂ. ೨೫: ಜಿಲ್ಲೆಯಲ್ಲಿ ಮನರಂಜನೆಯ ಹೆಸರಿನಲ್ಲಿ ಅಣಬೆಗಳಂತೆ ತಲೆಯೆತ್ತಿರುವ ಇಸ್ಪೀಟ್ ಕ್ಲಬ್ಗಳನ್ನು ಮುಚ್ಚಲು ಜಿಲ್ಲಾ ಪೊಲೀಸ್ ಇಲಾಖೆ ನಿಯಮಾನುಸಾರ ಕ್ರಮ ಕೈಗೊಂಡಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ತಿಳಿಸಿದ್ದಾರೆ.
ಅವರು ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಪುರಾತನ ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಕ್ಲಬ್ಗಳನ್ನು ಹೊರತುಪಡಿಸಿ ಮನರಂಜನೆ ಹೆಸರಿನಲ್ಲಿ ಇತ್ತೀಚೆಗೆ ತಲೆಯೆತ್ತಿರುವ ಎಲ್ಲಾ ಕ್ಲಬ್ಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.
ಒಂದು ವೇಳೆ ಅಕ್ರಮವಾಗಿ ಕ್ಲಬ್ ನಡೆಸಿದಲ್ಲಿ ಅದರ ಮಾಲೀಕರುಗಳನ್ನು ರೌಡಿಲಿಸ್ಟ್ಗೆ ಸೇರಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇಂತಹ ಇಸ್ಪೀಟ್ ಅಡ್ಡಗಳು ಮತ್ತು ಅಕ್ರಮ ಚಟುವಟಿಕೆಗಳಿಂದ ಸಾರ್ವಜನಿಕವಾಗಿ ಅಶಾಂತಿ ಉಂಟಾಗುತ್ತಿದೆ. ಈ ಸಂಬAಧ ಸಾರ್ವಜನಿಕರಿಂದ ದೂರು ಬಂದಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯ ಗಡಿಭಾಗ ಕುಶಾಲನಗರ ವ್ಯಾಪ್ತಿಯ ಸಮೀಪ ಕೊಪ್ಪ ಸುತ್ತಮುತ್ತ ಕ್ಲಬ್ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಕೂಡ ಮಾಹಿತಿ ಬಗ್ಗೆ ಪ್ರತಿಕ್ರಿಯಿಸಿದ ರಾಮರಾಜನ್, ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಡಿ.ವೈ.ಎಸ್.ಪಿ., ಆರ್.ವಿ. ಗಂಗಾಧರಪ್ಪ, ಕುಶಾಲನಗರ ಪಟ್ಟಣ ಠಾಣೆ ಇನ್ಸ್ಪೆಕ್ಟರ್ ಪ್ರಕಾಶ್, ಠಾಣಾಧಿಕಾರಿ ಚಂದ್ರಶೇಖರ್ ಇದ್ದರು.