ಮಡಿಕೇರಿ, ಜೂ. ೨೫: ಸುವರ್ಣ ಕರ್ನಾಟಕ ೫೦ರ ಸಂಭ್ರಮದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಅರಮೇರಿ ಕಳಂಚೇರಿ ಮಠ ಮತ್ತು ಎಸ್.ಎಂ.ಎಸ್. ಶಿಕ್ಷಣ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಆರೋಢ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ. ಮಾಗನೂರು ಬಸಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ದಾವಣಗೆರೆಯ ಸುನಂದಾದೇವಿ ಮತ್ತು ಸಂಗಮೇಶ್ವರ ಗೌಡ ಇವರು ಶರಣ ತತ್ವ ಪ್ರಚಾರ ಮತ್ತು ಶರಣ ವಿಚಾರ ತಿಳಿಯಪಡಿಸುವ ಉದ್ದೇಶದಿಂದ ಸ್ಥಾಪಿಸಿರುವ ದತ್ತಿ ಕಾರ್ಯಕ್ರಮವು ತಾ. ೨೭ ರಂದು ಮಧ್ಯಾಹ್ನ ೧ ಗಂಟೆಗೆ ಅರಮೇರಿ ಕಳಚೇರಿ ಮಠದ ಎಸ್.ಎಂ.ಎಸ್. ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷ ಹೆಚ್.ವಿ. ಶಿವಪ್ಪ ನೆರವೇರಿಸಲಿದ್ದಾರೆ. ಕನ್ನಡ ಭಾಷೆಯ ಬೆಳವಣಿಗೆಗೆ ಶರಣರು ನೀಡಿರುವ ಕೊಡುಗೆ ಕುರಿತು ವೀರಾಜಪೇಟೆಯ ಸಂತ ಅನ್ನಮ್ಮ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರತಿಮಾ ರೈ ಉಪನ್ಯಾಸ ನೀಡಲಿದಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ನ ಗೌರವ ಕಾರ್ಯದರ್ಶಿ ಎಂ.ಬಿ. ಸಂಗಮೇಶ್ವರ ಗೌಡ ಮತ್ತು ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ, ರೇವತಿ ರಮೇಶ್ ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್ ಮತ್ತು ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದು ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.