ಸುಂಟಿಕೊಪ್ಪ, ಜೂ. ೨೫: ಮಾದಾಪುರ ಗ್ರಾಮ ಪಂಚಾಯಿತಿ ಹಲವು ಸಮಸ್ಯೆಗಳ ಆಗರವಾಗಿ ಪರಿವರ್ತನೆಗೊಂಡಿದ್ದು, ಅಭಿವೃದ್ಧಿ ಕಾರ್ಯಗಳು ಕುಂಠಿತಗೊAಡು ಆಡಳಿತ ಮೇಲೆ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ೨ನೇ ಅವಧಿಗೆ ಅಧ್ಯಕ್ಷರು ಆಯ್ಕೆಗೊಂಡು ೧ ವರ್ಷ ಕಳೆದರೂ ಮಾದಾಪುರ ಗ್ರಾಮ ಪಂಚಾಯಿತಿಯ ಗ್ರಾಮಸಭೆ ಇದುವರೆಗೂ ನಡೆಯದೆ ಅಭಿವೃದ್ಧಿ ಕಾರ್ಯಗಳು ಹಿನ್ನಡೆ ಸಾಧಿಸಿವೆ. ಈ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಪದೇ ಪದೇ ವರ್ಗಾವಣೆಯಾಗುತ್ತಿರುವುದು ಹಾಲಿ ಪಿಡಿಓ ಐಗೂರು ಹಾಗೂ ಮಾದಾಪುರ ಎರಡು ಪಂಚಾಯಿತಿಗಳ ಜವಾಬ್ದಾರಿ ಇರುವುದರಿಂದ ನಿರೀಕ್ಷಿಸಿದ ಮಟ್ಟದ ಕೆಲಸಗಳು ಗ್ರಾಮದಲ್ಲಿ ನಡೆಯುತ್ತಿಲ್ಲ ಎಂಬ ಆರೋಪ ಜನರಿಂದ ಕೇಳಿಬರುತ್ತಿದೆ. ಜಂಬೂರು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿರುವುದರಿAದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಗುತ್ತಿಗೆ ಪಡೆದವರು ಅರ್ಧದಲ್ಲೇ ಕೆಲಸ ಮೊಟಕುಗೊಳಿಸಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಪ್ರಶ್ನೆ ಎದ್ದಿದೆ.
ಜಂಬೂರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸೆಪ್ಟಿಕ್ ಟ್ಯಾಂಕ್ನ ನೀರು ಚರಂಡಿಯಲ್ಲಿ ಕಟ್ಟಿ ನಿಂತು ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ಬದುಕು ಸಾಗಿಸುವ ಸ್ಥಿತಿ ಇದೆ. ತೋಟಗಾರಿಕೆ ಇಲಾಖೆ ಜಾಗದಲ್ಲಿ ಕಸ ವಿಲೇವಾರಿಗೊಳ್ಳುತ್ತಿದ್ದು, ಇಲ್ಲಿನ ಜನರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆಯೂ ಮೌನವಹಿಸಿರುವ ಆಡಳಿತ ಪರಿಹಾರೋಪಾಯದ ಬಗ್ಗೆ ಗಮನಹರಿಸುತ್ತಿಲ್ಲ.
ಮೂವತ್ತೋಕ್ಲುವಿನಲ್ಲಿ ಕಸ ವಿಲೇವಾರಿ ಪೈಸಾರಿ ಜಾಗ ಗುರುತಿಸಿದ್ದರೂ, ಪಂಚಾಯಿತಿ ಖಾತೆಗೆ ಇನ್ನೂ ವರ್ಗಾವಣೆಗೊಳ್ಳದೆ ಸಮಸ್ಯೆಯಾಗಿದೆ. ಈ ಜಾಗದಲ್ಲಿ ನಿವೇಶನ ರಹಿತರಿಗೂ ೨ ಎಕರೆ ಜಾಗ ಗುರುತಿಸಲಾಗಿದ್ದು, ಅದು ಕಾರ್ಯರೂಪಕ್ಕೆ ಬಂದಿಲ್ಲ.
ಮನೆ ಇಲ್ಲದೆ ನೂರಾರು ಮಂದಿ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ೆಚಾತಕಪಕ್ಷಿಯಂತೆ ದಶಕಗಳಿಂದ ಕಾಯುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. - ರಾಜು ರೈ