ಕುಶಾಲನಗರ, ಜೂ. ೨೫: ಹಾರಂಗಿ ಅಣೆಕಟ್ಟು ಸಮೀಪ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
‘ಶಕ್ತಿ’ಯಲ್ಲಿ ಪ್ರಕಟಗೊಂಡ ‘ಹಾರಂಗಿ ಅಣೆಕಟ್ಟೆ ಅಂಚಿನಲ್ಲಿ ಗಣಿಗಾರಿಕೆ ತಂದಿರುವ ಆತಂಕ’ ವರದಿಗೆ ಪ್ರತಿಕ್ರಿಯಿಸಿರುವ ಅವರು, ಈ ಬಗ್ಗೆ ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳ ಲಾಗುವುದು ಎಂದಿದ್ದಾರೆ.
ವರದಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಹಾರಂಗಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಅಭಿಯಂತರ ಬಿ.ಜೆ. ಪುಟ್ಟಸ್ವಾಮಿ ಅವರು ಈ ಬಗ್ಗೆ
(ಮೊದಲ ಪುಟದಿಂದ) ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಅಣೆಕಟ್ಟೆಗೆ ಯಾವುದೇ ರೀತಿಯ ಅಪಾಯ ಉಂಟಾಗದAತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ವರದಿಗೆ ಸ್ಪಂದಿಸಿದ್ದು, ಗಣಿಗಾರಿಕೆಗೆ ಅನುಮತಿ ನೀಡಿರುವ ಕಡತಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.