ಮಡಿಕೇರಿ, ಜೂ. ೨೫: ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಇದೇ ತಾ.೨೭ ರಂದು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅರ್ಥಪೂರ್ಣ ವಾಗಿ ಆಯೋಜಿಸಬೇಕಿದ್ದು, ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲೆ ಸ್ಪರ್ಧೆ ಏರ್ಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಸಂಬAಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮೂವರನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಿ ಕೊಡಬೇಕು.

ಸ್ಥಳೀಯ ಸಂಸ್ಥೆಗಳು ತಾಲ್ಲೂಕು ಹಾಗೂ ಜಿಲ್ಲಾಡಳಿತದ ಜೊತೆ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸುವಂತೆ ಕರೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಮಾತನಾಡಿ, ಕಾರ್ಯಕ್ರಮ ವನ್ನು ಅಚ್ಚುಕಟ್ಟಾಗಿ ನಡೆಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕರೆ ನೀಡಿದರು.

ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯ ದರ್ಶಿ ಎಸ್.ಎಲ್. ಬಸವರಾಜು ಅವರು ಮಾತನಾಡಿ ಕೆಂಪೇಗೌಡ ದಿನಾಚರಣೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ಅವರು ಕೆಂಪೇಗೌಡ ಜಯಂತಿ ಆಚರಣೆ ಸಂಬAಧ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಆಯ್ಕೆ ಮಾಡಿ ವರದಿ ನೀಡಲಾಗು ವುದು ಎಂದು ಮಾಹಿತಿ ನೀಡಿದರು.

ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕÀ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗ ರಾಜು ದೊಡ್ಡಮನಿ, ಜಿ.ಪಂ. ಎಂಜಿನಿ ಯರ್ ಮುತ್ತುರಾಜ್, ಸುರೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇ ಶಕ ನಟರಾಜು, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ. ವಿಸ್ಮಯಿ, ವಿಕಲಚೇತನರ ಅಧಿಕಾರಿ ವಿಮಲ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಶಿಕ್ಷಣಾಧಿಕಾರಿ ಕೃಷ್ಣಪ್ಪ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ ಇತರರು ಇದ್ದರು.