ಸೋಮವಾರಪೇಟೆ, ಜೂ. ೨೫: ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ವತಿಯಿಂದ ತಾಲೂಕಿನ ಮಾದಾಪುರದ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ತಾ. ೨೮ರಂದು ಬೆಳಿಗ್ಗೆ ೧೧ಕ್ಕೆ ಪಿಂಚಣಿ ದಿನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ನವೀನ್ಕುಮಾರ್ ವಹಿಸಲಿದ್ದು, ಮಾದಾಪುರ ವೃತ್ತದ ಪಿಂಚಣಿದಾರರ ಕುಂದು ಕೊರತೆಗಳನ್ನು ಸಭೆಯಲ್ಲಿ ಚರ್ಚಿಸಿ, ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.