ಬೆಂಗಳೂರು, ಜೂ. ೨೫: ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರಗಳನ್ನು ಏರಿಕೆ ಮಾಡಿದೆ. ಪ್ರತಿ ಲೀಟರ್ಗೆ ೨ ರೂಪಾಯಿ ಏರಿಕೆ ಮಾಡಿದೆ. ಆದರೆ, ಅದರೊಂದಿಗೆ ೫೦ ಮಿಲಿ ಲೀಟರ್ ಹೆಚ್ಚಿನ ಹಾಲು ಇರಲಿದೆ. ತಾ. ೨೬ ರಿಂದ (ಇಂದಿನಿAದ) ಹೊಸ ದರ ಅನ್ವಯವಾಗಲಿದೆ.
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು. ಪ್ರತಿ ಲೀಟರ್ ಹಾಲಿಗೆ ೨ ರೂ. ಏರಿಕೆ ಮಾಡಲಾಗಿದೆ ಹಾಗೂ ಅರ್ಧ ಲೀಟರ್ ಹಾಲಿನ ದರ ೨೨ ರೂ. ನಿಂದ ೨೪ ರೂ.ಗೆ ಹೆಚ್ಚಿಸಲಾಗಿದೆ. ಆದರೆ ಗ್ರಾಹಕರಿಗೆ ಸಿಗುತ್ತಿದ್ದ ೧,೦೦೦ ಎಂಎಲ್ (೧ ಲೀಟರ್) ಪ್ಯಾಕೆಟ್ ಹಾಲು ಇನ್ಮುಂದೆ ೧,೦೫೦ ಎಂಎಲ್ ಹಾಗೂ ಅರ್ಧ ಲೀಟರ್ ಪ್ಯಾಕೆಟ್ ಹಾಲು ೫೫೦ ಎಂಎಲ್ ಸಿಗಲಿದೆ ಎಂದು ಮಾಹಿತಿ ನೀಡಿದರು.
ಕೆಎಂಎಫ್ ಇಡೀ ರಾಷ್ಟçದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಳಿಯಾಗಿದೆ. ೯೮ ಲಕ್ಷದ ೧೭ ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ. ಒಂದು ಕೋಟಿ ಲೀಟರ್ ಹಾಲಿನ ಶೇಖರಣೆ ಮಾಡಲು ಸಿದ್ಧರಾಗಿದ್ದೇವೆ. ೨೭ ಲಕ್ಷ ಹಾಲು ಉತ್ಪಾದಕ ರೈತರಿಂದ ನಮಗಿದು ಸಾಧ್ಯವಾಗಿದೆ. ೩೦ ಲಕ್ಷ ಲೀಟರ್ ಹಾಲು, ಹಾಲಿನ ಪೌಡರ್ಗೆ ಮೀಸಲಾಗಿದೆ ಎಂದು ಭೀಮಾ ನಾಯ್ಕ್ ವಿವರಿಸಿದ್ದು, ಬೇರೆ ರಾಜ್ಯಗಳಿಗೆ ಹಾಲಿನದರ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಪ್ಯಾಕೆಟ್ ಹಾಲಿನ ಬೆಲೆ ಕಡಿಮೆ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಡೈರಿಗಳಲ್ಲಿ ರೈತರು ತರುವ ಹೆಚ್ಚುವರಿ ಹಾಲನ್ನು ನಿರಾಕರಿಸಬಾರದು ಜೊತೆಗೆ ಗ್ರಾಹಕರಿಗೂ ಹೊರೆಯಾಗದ ರೀತಿ ಹಾಲನ್ನು ತಲುಪಿಸುವ ಉದ್ದೇಶದಿಂದ ಕೆ.ಎಂ.ಎಫ್. ಈ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿದ್ದಾರೆ.