ಮಡಿಕೇರಿ, ಜೂ. ೨೬: ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ.೨೭ ರಂದು (ಇಂದು) ಮಧ್ಯಾಹ್ನ ೩.೩೦ ರಿಂದ ೪.೩೦ ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.