ಮಡಿಕೇರಿ, ಜೂ. ೨೬: ಜೂನ್ ೩೦ ರಂದು ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಪರೀಕ್ಷಾ ಮಾರ್ಗ ಸೂಚಿಯಂತೆ ನಡೆಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಯನ್ನು ಯಾವುದೇ ರೀತಿ ಲೋಪ ಉಂಟಾಗದAತೆ ಗಮನಹರಿಸುವಂತೆ ಸೂಚಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಅವರು ಮಾತನಾಡಿ, ಕರ್ನಾಟಕ ಟಿಇಟಿ ಪರೀಕ್ಷೆಯು ಇದೇ ಜೂನ್ ೩೦ ರಂದು ಮಡಿಕೇರಿಯಲ್ಲಿ ನಡೆಯಲಿದೆ. ಒಟ್ಟು ಮೂರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಡಿವೈಎಸ್‌ಪಿ ಮಹೇಶ್ ಕುಮಾರ್, ಪ್ರಾಂಶುಪಾಲ ವಿಜಯ್, ಪರೀಕ್ಷಾ ನೋಡಲ್ ಅಧಿಕಾರಿ ಕೆ.ಆರ್.ಬಿಂದು, ಕೂಡಿಗೆ ಡಯಟ್‌ನ ಉಪನ್ಯಾಸಕರಾದ ಗೀತಾ, ಜಾನ್ಸನ್, ಸುಕ್ರುದೇವ್ ಗೌಡ ಇತರರು ಇದ್ದರು.