ನವದೆಹಲಿ, ಜೂ. ೨೬: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು ೧೮ನೇ ಲೋಕಸಭೆಯ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ.
ಆಡಳಿತಾರೂಢ ರಾಷ್ಟಿçÃಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ೪೮ ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಯಿತು.
(ಮೊದಲ ಪುಟದಿಂದ) ಓಂ ಬಿರ್ಲಾ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಿದರು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು. ಓಂ ಬಿರ್ಲಾ ಅವರು ಎನ್ಡಿಎ ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾದರು. ಕಾಂಗ್ರೆಸ್ನ ಕೋಡಿಕುನ್ನಿಲ್ ಸುರೇಶ್ ಅವರು ಓಂ ಬಿರ್ಲಾ ಎದುರು ಸೋತರು. ಜಯ ಸಾಧಿಸಿದ ನಂತರ ಬಿರ್ಲಾ ಅವರನ್ನು ಸ್ಪೀಕರ್ ಕುರ್ಚಿ ಬಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕರೆದುಕೊಂಡು ಬಂದು ಗೌರವಿಸಿದರು.
೧೭ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಅವರ ಐದು ವರ್ಷಗಳ ಅನುಭವವು ಸದನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸಲು ಮತ್ತು ಅದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಪ್ರಧಾನಿ ವ್ಯಕ್ತಪಡಿಸಿದರು.