ಸೋಮವಾರಪೇಟೆ, ಜೂ. ೨೬: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಅರ್ಥಪೂರ್ಣ ವಾಗಿ ಆಚರಿಸಲು ತೀರ್ಮಾನಿಸ ಲಾಗಿದ್ದು, ತಾ.೨೭ರಂದು (ಇಂದು) ಬೆಳಿಗ್ಗೆ ೯.೩೦ಕ್ಕೆ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಾಲೂಕು ತಹಶೀಲ್ದಾರ್ ನವೀನ್ ಕುಮಾರ್ ತಿಳಿಸಿದ್ದಾರೆ.

ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳಿಂದ ಕೆಂಪೇಗೌಡ ಅವರ ಜೀವನ ಸಾಧನೆ ಬಗ್ಗೆ ಮಾಹಿತಿ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರಸಕ್ತ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ತೋರಿದ ವಿದ್ಯಾರ್ಥಿಗಳು, ಕೆಂಪೇಗೌಡ ಜಯಂತಿ ಅಂಗವಾಗಿ ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾ ದವರಿಗೆ ಬಹುಮಾನ ವಿತರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಪ್ರಥಮ ಬಾರಿಗೆ ತಾಲೂಕು ಆಡಳಿತದ ಮೂಲಕ ಕೆಂಪೇಗೌಡ ಅವರ ಜಯಂತಿಯನ್ನು ಆಚರಿಸುತ್ತಿದ್ದು, ಎಲ್ಲಾ ಇಲಾಖಾಧಿಕಾರಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಕೈಜೋಡಿಸಬೇಕೆಂದು ನವೀನ್ ಕುಮಾರ್ ಮನವಿ ಮಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಕೀಲ ಅಭಿಮನ್ಯುಕುಮಾರ್, ಉಪನ್ಯಾಸಕಿ ತಿಲೋತ್ತಮೆ ಅವರುಗಳು ಭಾಗವಹಿಸಲಿದ್ದಾರೆ ಎಂದರು. ಸಭೆಯಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಪ್ರಮುಖರಾದ ನಂದಕುಮಾರ್, ಕೆ.ಟಿ. ಪರಮೇಶ್, ಮಹೇಶ್, ಶೀಲಾ ಡಿಸೋಜ, ಪಿ.ಕೆ. ಚಂದ್ರು, ಗಂಗಾಧರ್, ವಿನು, ಬಾಲಕೃಷ್ಣ, ಚಂಗಪ್ಪ, ಪ್ರಕಾಶ್, ಇಲಾಖಾಧಿಕಾರಿಗಳಾದ ಸ್ವಾಮಿ, ರೋಹಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.