ವೀರಾಜಪೇಟೆ, ಜೂ. ೨೬: ವೀರಾಜಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಉತ್ತಮ ಮಳೆಯಾಗಿದೆ.

ಮಂಗಳವಾರ ರಾತ್ರಿಯಿಡಿ ಸುರಿದ ಮಳೆಯು ಬುಧವಾರವೂ ಮುಂದುವರೆಯಿತು. ಬುಧವಾರ ದಿನವಿಡಿ ಬಿಡುವು ನೀಡದೆ ಮಳೆ ಸುರಿಯಿತು. ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳ ಆರ್ಜಿ, ಬೇಟೋಳಿ, ರಾಮನಗರ, ಹೆಗ್ಗಳ, ಬಿಟ್ಟಂಗಾಲ, ಬಾಳುಗೋಡು, ಮಗ್ಗುಲ, ಬಿಳುಗುಂದ, ಕದನೂರು, ಕಾಕೋಟುಪರಂಬು, ದೇವಣಗೇರಿ, ಚೆಂಬೆಬೆಳ್ಳೂರು ಗ್ರಾಮಗಳ ವ್ಯಾಪ್ತಿಯಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಉತ್ತಮ ಮಳೆ ಸುರಿದಿದೆ.

ಮಳೆಯಿಂದಾಗಿ ಬುಧವಾರ ವೀರಾಜಪೇಟೆ ಹೋಬಳಿಯ ಕಂಡAಗಾಲ ಗ್ರಾಮದ ಮಾಣೀರ ಗಂಗಮ್ಮ ಅವರ ವಾಸದ ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಿಗರಾದ ಪೂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿರಂತರವಾಗಿ ಸುರಿದ ಮಳೆಯಿಂದಾಗಿ ಸಮೀಪದ ಬೆೆÃತ್ರಿಯಲ್ಲಿನ ಕಾವೇರಿ ಹೊಳೆ ಹಾಗೂ ಕದನೂರು ಹೊಳೆಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಭತ್ತದ ಗದ್ದೆಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆಗಳು ಗರಿಗೆದರಿವೆ.