ಕುಶಾಲನಗರ, ಜೂ. ೨೭: ಹರ್ಷಾಲಿ ಫೌಂಡೇಶನ್ ಬೆಂಗಳೂರು ಮತ್ತು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದೊಂದಿಗೆ ಕುಶಾಲನಗರ ಸಮೀಪ ದೊಡ್ಡ ಹೊಸೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ಶಾಲಾ ಪರಿಕರಗಳ ವಿತರಣಾ ಕಾರ್ಯಕ್ರಮ ತಾ. ೨೮ರಂದು (ಇಂದು) ನಡೆಯಲಿದೆ.

ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ ಆರ್ ಸವಿತಾ ರೈ ನೆರವೇರಿಸಲಿದ್ದಾರೆ.