ಮಡಿಕೇರಿ, ಜೂ. ೨೮ : ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿಲ್ಲೆಯ ಪ್ರಖ್ಯಾತ ಪ್ರವಾಸಿ ಸ್ಥಳಗಳಾಗಿರುವ ಅಬ್ಬಿ ಜಲಪಾತ ಹಾಗೂ ಮಾಂದಲಪಟ್ಟಿಗೆ ಪ್ರವೇಶ ಕಲ್ಪಿಸುವ ನಂದಿಮೊಟ್ಟೆ ಜಂಕ್ಷನ್‌ನಲ್ಲಿ ತಲೆ ಎತ್ತಿರುವ ಗ್ಲಾಸ್ ಬ್ರಿಡ್ಜ್ ಅನ್ನು ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕೆ.ನಿಡುಗಣೆ ಪಂಚಾಯಿತಿ ವತಿಯಿಂದ ಮುಚ್ಚಿಸಲ್ಪಟ್ಟಿದ್ದು, ಅನುಮತಿ ರಹಿತ ನಿರ್ಮಿಸಿರುವ ಈ ಬ್ರಿಡ್ಜ್ ಹಾಗೂ ಜಾಗವನ್ನು ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದೆ.

ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಇತ್ತೀಚೆಗೆ ನಿರ್ಮಿಸ ಲಾಗಿರುವ ಗ್ಲಾಸ್ ಬ್ರಿಡ್ಜ್ ಕೆಳಭಾಗದಲ್ಲಿ ಈ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬರೆ ಜರಿತ ಸಂಭವಿಸಿದೆ. ಇದರ ವೀಡಿಯೋ, ಫೋಟೋ ತಾ.೨೭ರ ಸಂಜೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಇದರ ಆಧಾರದ ಮೇಲೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೆ.ನಿಡುಗಣೆ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಪಿ.ಡಿ.ಓ ಮಮತಾ ಅವರಿಗೆ ಸೂಚನೆ ನೀಡಿ ಗ್ಲಾಸ್ ಬ್ರಿಡ್ಜ್ಗೆ ಪ್ರವೇಶವನ್ನು ನಿನ್ನೆ ರಾತ್ರಿಯಿಂದಲೇ ನಿರ್ಬಂಧಿಸುವAತೆ ಸೂಚಿಸಿದರು.

ಇಂದು ಸ್ಥಳಕ್ಕೆ ತೆರಳಿದ ‘ಶಕ್ತಿ’ಗೆ ಬರೆ ಜರಿತವಾಗಿರುವ ಸ್ಥಳದಲ್ಲಿ ಟಾರ್ಪಲ್ ಹಾಕಿ

(ಮೊದಲ ಪುಟದಿಂದ) ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಶಾಲೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಶಿಥಿಲ ವ್ಯವಸ್ಥೆಯಲ್ಲಿರುವ ಶಾಲೆಗಳ ಮಾಹಿತಿ ನೀಡಬೇಕು. ಈ ಸಂಬAಧ ಅಗತ್ಯ ಕ್ರಮವಹಿಸುವಂತೆ ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ರಸ್ತೆ ಸಾರಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು, ರಸ್ತೆಗಳ ಬಗ್ಗೆ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಂದ ದೂರು ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಾಕೀತು ಮಾಡಿದರು.

ತಗ್ಗು ಪ್ರದೇಶದಲ್ಲಿ ಹೆಚ್ಚಿನ ಮಳೆಯಿಂದಾಗಿ ಮನೆಗೆ ನೀರು ನುಗ್ಗುವುದು ಸೇರಿದಂತೆ ಮಳೆಯಿಂದ ಉಂಟಾಗುವ ಹಾನಿಯ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು, ನಿಯಮಾನುಸಾರ ಪರಿಹಾರ ನೀಡಬೇಕು ಎಂದರು.

ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾರೂ ಸಹ ಕೇಂದ್ರ ಸ್ಥಾನದಿಂದ ಹೊರಗೆ ಹೋಗಬಾರದು. ಸಮಸ್ಯೆಗಳಿದ್ದಲ್ಲಿ ಅನುಮತಿ ಪಡೆಯಬೇಕು. ಬೆಂಗಳೂರಿನಲ್ಲಿ ಸಭೆ ಇದೆ ಎಂದು ತೆರಳಬಾರದು. ಈ ಸಂಬAಧ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿ ವಿನಾಯಿತಿ ಪಡೆಯಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ರಾಷ್ಟಿçÃಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಅಪಘಾತಗಳು ಸಂಭವಿಸಿದಲ್ಲಿ ದೂರುಗಳು ಕೇಳಿ ಬರುತ್ತದೆ. ಈ ಬಗ್ಗೆ ಮಾಹಿತಿ ಫಲಕಗಳನ್ನು ಅಳವಡಿಸಬೇಕು, ರಸ್ತೆಗಳನ್ನು ಸರಿಪಡಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.