ಮಡಿಕೇರಿ, ಜೂ. ೨೭: ಅಂತೂ, ಇಂತೂ ಕೊಡಗು ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಗಡಿ ನಿಗದಿಪಡಿಸಿ ಸೀಮಾಗಡಿ ನಿರ್ಣಯ ಆಯೋಗವು ಬುಧವಾರ ಪ್ರಕಟಿಸಿ, ಜುಲೈ ೩ ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆದರೆ ಈ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕನಿಷ್ಟ ಐದು ಸ್ಥಾನಗಳಲ್ಲಿ ಕೊಡಗಿನ ಕಾಂಗ್ರೆಸ್ ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರು ಕಾಂಗ್ರೆಸ್ನಿAದ ಟಿಕೆಟ್ ಪಡೆದು ಸ್ಪರ್ಧಿಸುವ ಲೆಕ್ಕಾಚಾರದಲ್ಲಿ ಇದ್ದರು. ಆದರೆ ಬುಧವಾರ ಪ್ರಕಟಗೊಂಡ ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ವಿಂಗಡಣೆ ಪಟ್ಟಿ ಕೊಡಗಿನ ಕಾಂಗ್ರೆಸ್ ಮುಸ್ಲಿಂ ಮುಖಂಡರಿಗೆ ಬಿಗ್ ಶಾಕ್ ನೀಡಿದೆ ಎಂದರೆ ತಪ್ಪಾಗಲಾರದು.
ಏಕೆಂದರೆ ೨೦೧೬ರಲ್ಲಿ ಇದ್ದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯನ್ನು ಸಂಪೂರ್ಣ ಬದಲಾವಣೆ ಮಾಡಲಾಗಿದೆ. ನಾಪೋಕ್ಲು, ಸಿದ್ದಾಪುರ, ಚೆನ್ನಯ್ಯನ ಕೋಟೆ, ಸುಂಟಿಕೊಪ್ಪ ಹಾಗೂ ಹೊಸದಾಗಿ ರಚಿಸಿರುವ ಹಾಲುಗುಂದ ಕ್ಷೇತ್ರಗಳಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತ ಮುಖಂಡರು ಸ್ಪರ್ಧಿಸಿದರೆ ಸುಲಭದಲ್ಲಿ ಗೆಲ್ಲುವ ಅವಕಾಶ ಇತ್ತು.
ವಾಲ್ನೂರು-ತ್ಯಾಗತ್ತೂರು ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಮಾಡದೆ. ೨೦೧೬ರಲ್ಲಿ ಇದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಗಳನ್ನು ಹಾಗೇ ಉಳಿಸಲಾಗಿದೆ. ವಾಲ್ನೂರು-ತ್ಯಾಗತ್ತೂರು ಕ್ಷೇತ್ರದಲ್ಲಿ ಕೂಡ ಅತೀ ಹೆಚ್ಚು ಅಲ್ಪಸಂಖ್ಯಾತ ಮತದಾರರೇ ಇದ್ದಾರೆ. ಈ ಕ್ಷೇತ್ರದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಮುಖರೊಬ್ಬರು ಸ್ಪರ್ಧಿಸುವ ಕಾರಣದಿಂದ ಕ್ಷೇತ್ರದಲ್ಲಿ ಬದಲಾವಣೆ ಮಾಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.
ವಾಲ್ನೂರು-ತ್ಯಾಗತ್ತೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮೇಲೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮತ್ತೊಂದು ಬಾರಿ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾರೆ. ಆದರೆ ಈ ಕ್ಷೇತ್ರದಲ್ಲಿ ಈ ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಈ ಹಿಂದೆ ಸಿದ್ದಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮುಸ್ಲಿಂ ಮತದಾರರು ಇದ್ದ ಕೊಂಡAಗೇರಿ, ಹಾಲುಗುಂದ ಭಾಗವನ್ನು ಇದೀಗ ಸಿದ್ದಾಪುರ ಕ್ಷೇತ್ರದಿಂದ ಕೈ ಬಿಡಲಾಗಿದೆ. ಹೊಸದಾಗಿ ಹಾಲುಗುಂದ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ರಚಿಸಲಾಗಿದೆ.
ಹಾಲುಗುಂದ, ಕೊಂಡAಗೇರಿ ಭಾಗವು ಸಿದ್ದಾಪುರ ಕ್ಷೇತ್ರದಲ್ಲಿದ್ದರೆ ಸುಲಭದಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರು ಸ್ಪರ್ಧಿಸಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿತ್ತು, ಆದರೆ ಇದೀಗ ಹಾಲುಗುಂದ ಮತ್ತು ಸಿದ್ದಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರು ಟಿಕೆಟ್ ಕೇಳದ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದಾಪುರ ಕ್ಷೇತ್ರದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸ್ಪರ್ಧಿಸುವ ಸಾಧ್ಯತೆ ಇದೆ. ಹಾಲುಗುಂದ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಹಾಲುಗುಂದ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರೆಹಮಾನ್ (ಅಂದಾಯಿ) ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಹಾಲುಗುAದ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ೨೫೦೦ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರು ಇದ್ದು, ಈ ಬಾರಿ ನನಗೆ ಅವಕಾಶ ನೀಡಬೇಕೆಂದು ಅಬ್ದುಲ್ ರೆಹಮಾನ್ ಟಿಕೆಟ್ಗಾಗಿ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದೆಡೆ ಹಾಲುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಂದಿಕAಡ ದಿನೇಶ್ (ಕುಶ) ಅವರು ಕೂಡ ಹಾಲುಗುಂದ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.
ವಿಶೇಷವೇನೆಂದರೆ ಜಿಲ್ಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆದರೆ, ಹಾಲುಗುಂದ ಜಿಲ್ಲಾ ಪಂಚಾಯಿತಿ ಕ್ಷೇತ್ರ ಜೆಡಿಎಸ್ ವಶಕ್ಕೆ ಪಡೆದುಕೊಂಡು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸೀರ್ ಮೂರ್ನಾಡು ಸ್ಪರ್ಧಿಸುವ ಲೆಕ್ಕಾಚಾರದಲ್ಲಿ ಇದ್ದಾರೆ. ಮತ್ತೊಂದೆಡೆ ಕಾಂತೂರು-ಮೂರ್ನಾಡು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮೇಲೆ ಕೂಡ ಜಾಸೀರ್ ಮೂರ್ನಾಡು ಕಣ್ಣಿಟ್ಟಿದ್ದಾರೆ.
ಪ್ರತೀ ಬಾರಿಯ ಚುನಾವಣೆಯಂತೆ ಈ ಬಾರಿ ಕೂಡ ನಾಪೋಕ್ಲು ಜಿಲ್ಲಾ ಪಂಚಾಯಿತಿ ಕ್ಷೇತ್ರ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ಗಾಗಿ ಬಿಗ್ಫೈಟ್ ಕೂಡ ನಡೆಯುತ್ತಿವೆ. ನಾಪೋಕ್ಲು ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಎಮ್ಮೆಮಾಡು ಹೊರತುಪಡಿಸಿದರೆ ಅತೀ ಹೆಚ್ಚು ಮುಸ್ಲಿಂ ಮತದಾರರು ಇದ್ದ ಹೊದ್ದೂರು ಗ್ರಾಮ ಪಂಚಾಯಿತಿಯನ್ನು ಇದೀಗ ನಾಪೋಕ್ಲು ಕ್ಷೇತ್ರದಿಂದ ಕೈ ಬಿಟ್ಟು ಕಾಂತೂರು ಮೂರ್ನಾಡು ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಸೇರ್ಪಡೆ ಮಾಡಲಾಗಿದೆ. ನಾಪೋಕ್ಲು ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಬಲ್ಲಮಾವಟಿ ಗ್ರಾಮ ಪಂಚಾಯಿತಿಯನ್ನು ಸೇರ್ಪಡೆ ಮಾಡಲಾಗಿದೆ.
ನಾಪೋಕ್ಲು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಈಗಿನ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಈಗಿನ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ಕೊಟ್ಟಮುಡಿ ಅವರು ಬಂಡಾಯವಾಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದರು. ನಾಪೋಕ್ಲು ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಮುರಳೀಧರ್ ಗೆಲುವು ಸಾಧಿಸಿದ್ದರು. ಈ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಕೆ.ಎ. ಇಸ್ಮಾಯಿಲ್ ಮೂರನೇ ಸ್ಥಾನಕ್ಕೆ ಸೀಮಿತಗೊಂಡಿದ್ದರು.
ಆದರೆ ಈ ಬಾರಿ ಹಂಸ ಕೊಟ್ಟಮುಡಿ ಅವರಿಗೆ ಟಿಕೆಟ್ ನೀಡಬೇಕೆಂಬ ಕೂಗು ಪ್ರಬಲವಾಗಿ ಕೇಳಿಬರುತ್ತಿದೆ. ನಾಪೋಕ್ಲು ಭಾಗದಲ್ಲಿ ಹೆಚ್.ಎ. ಹಂಸ ಕೊಟ್ಟಮುಡಿ ಅವರಿಗೆ ಪಕ್ಷಾತೀತವಾಗಿ ಒಳ್ಳೆಯ ವರ್ಚಸ್ಸು ಇದ್ದು, ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಇದೆ. ನಾಪೋಕ್ಲು ಅಥವಾ ಎಮ್ಮೆಮಾಡು ತಾಲೂಕು ಪಂಚಾಯಿತಿ ಕ್ಷೇತ್ರದಿಂದ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಹಿಂದೆ ಸುಂಟಿಕೊಪ್ಪ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತರು ಸ್ಪರ್ಧಿಸಿದರೆ ಯಾವುದೇ ಬಂಡಾಯವಿಲ್ಲದಿದ್ದರೆ ಸುಲಭದಲ್ಲಿ ಗೆಲುವು ಸಾಧಿಸಬಹುದಿತ್ತು.
ಆದರೆ ಇದೀಗ ಸುಂಟ್ಟಿಕೊಪ್ಪ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಬಿಜೆಪಿ ಪ್ರಬಲವಾಗಿರುವ ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿಯನ್ನು ಸೇರ್ಪಡೆ ಮಾಡಲಾಗಿದೆ. ಸುಂಟಿಕೊಪ್ಪ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಪಿ.ಎಂ. ಲತೀಫ್ ಸ್ಪರ್ಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದ ಒಂದು ಬಣ ಪ್ರಭಾವ ಬಳಸಿ, ನಾಕೂರು ಶಿರಂಗಾಲ ಭಾಗವನ್ನು ಸುಂಟಿಕೊಪ್ಪ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಸೇರ್ಪಡೆ ಮಾಡಿ, ಪಿ.ಎಂ. ಲತೀಫ್ ಅವರು ಸ್ಪರ್ಧಿಸಿದರೆ ಸೋಲಬೇಕೆಂಬ ಕಾರಣದಿಂದ ಮಾಡಲಾಗಿದೆ ಎಂಬ ಅಭಿಪ್ರಾಯ ಕೂಡ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರಲ್ಲಿ ಇದೆ. ಮತ್ತೊಂದೆಡೆ ಪಿ.ಎಂ. ಲತೀಫ್ ಅವರು ಚೆನ್ನಯ್ಯನಕೋಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.
ಚೆನ್ನಯ್ಯನಕೋಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸಲು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎ. ಹನೀಫ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್ ಸ್ಪರ್ಧಿಸುವ ಸಾಧ್ಯತೆ ಇದೆ. ಆದರೆ ಚೆನ್ನಯ್ಯನಕೋಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಎಸ್.ಟಿ.-ಎಸ್.ಸಿ.ಗೆ ಮೀಸಲಾತಿ ಬರುವ ಸಾಧ್ಯತೆ ಇದೆ.
- ಕೆ.ಎಂ. ಇಸ್ಮಾಯಿಲ್ ಕಂಡಕರೆ