ಕೂಡಿಗೆ, ಜೂ. ೨೭: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಿಶಿಣಗುಪ್ಪೆ ಗ್ರಾಮದ ಸರ್ವೇ ನಂಬರ್ ೧೨ ರಲ್ಲಿರುವ ೨.೮೪ ಸೆಂಟು ಆಶ್ರಯ ಯೋಜನೆಯ ನಿವೇಶನಕ್ಕಾಗಿ ಮೀಸಲಿರಿಸಿರುವ ಜಾಗದಲ್ಲಿ ನಿವೇಶನ ರಹಿತರಿಗೆ ನಿವೇಶನಕ್ಕೆ ಜಾಗವನ್ನು ನೀಡುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ಈ ವ್ಯಾಪ್ತಿಯ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಶಾಸಕರ ಕಚೇರಿಯಲ್ಲಿ ಗ್ರಾಮಸ್ಥರ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಅರಿಶಿಣಗುಪ್ಪೆ ಗ್ರಾಮಸ್ಥರು ಶಾಸಕರಿಗೆ ಮನವಿ ಪತ್ರವನ್ನು ನೀಡಿದರು. ಅರ್ಜಿ ಪರಿಶೀಲನೆ ನಡೆಸಿದ ಶಾಸಕರು ಸಂಬAಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಕ್ರಮ ವಹಿಸಲಾಗುವುದು ಎಂದರು.