ಸೋಮವಾರಪೇಟೆ, ಜೂ. ೨೭: ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಾಡಿ ಗ್ರಾಮಕ್ಕೆ ಸೇತುವೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ಹಾಗೂ ಪ್ರಣವ್ ಫೌಂಡೇಷನ್ ವತಿಯಿಂದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಇಂಜಿನಿಯರಿAಗ್ ವಿಭಾಗಕ್ಕೆ ಮನವಿ ಸಲ್ಲಿಸಲಾಯಿತು.

ಅತ್ಯಾಡಿ ಗ್ರಾಮದಲ್ಲಿ ನೆಲೆಸಿರುವ ಗ್ರಾಮಸ್ಥರಿಗೆ ಈವರೆಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗಿಲ್ಲ. ಗ್ರಾಮಕ್ಕೆ ತೆರಳಲು ಅತೀ ಅಗತ್ಯವಾಗಿ ಬೇಕಾಗಿರುವ ಸೇತುವೆ ಸಂಪರ್ಕವನ್ನೇ ಕಲ್ಪಿಸಿಲ್ಲ. ಇದರಿಂದಾಗಿ ಗ್ರಾಮಸ್ಥರು, ವಿದ್ಯಾರ್ಥಿಗಳು ಸಂಕಷ್ಟದ ಜೀವನ ನಡೆಸುತ್ತಿದ್ದು, ತಕ್ಷಣ ಈ ಬಗ್ಗೆ ಗಮನ ಹರಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದರೊಂದಿಗೆ ಮಳೆಗಾಲದ ಸಂದರ್ಭ ಮೂರರಿಂದ ನಾಲ್ಕು ತಿಂಗಳ ಕಾಲ ಇಡೀ ಗ್ರಾಮವೇ ಹೊರ ಜಗತ್ತಿನ ಸಂಪರ್ಕದಿAದ ಬೇರ್ಪಡುತ್ತದೆ. ಸ್ವಾತಂತ್ರö್ಯ ಬಂದು ೭೫ ವರ್ಷಗಳು ಪೂರ್ಣಗೊಂಡರೂ ಇಲ್ಲಿನ ನಿವಾಸಿಗಳಿಗೆ ಸಂಪರ್ಕದ ವ್ಯವಸ್ಥೆಯನ್ನೇ ಕಲ್ಪಿಸದಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ. ಸೇತುವೆ ಇಲ್ಲದ್ದರಿಂದ ವಿದ್ಯಾರ್ಥಿಗಳು, ಮಕ್ಕಳು, ಅನಾರೋಗ್ಯಪೀಡಿತರು ನರಕ ಸದೃಶ ಬದುಕು ನಡೆಸುವಂತಾಗಿದೆ. ಈ ಹಿನ್ನೆಲೆ ತಕ್ಷಣ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮನವಿ ಮಾಡಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭ ಅಧ್ಯಕ್ಷ ಶ್ರೀನಿಧಿ, ಕಾರ್ಯದರ್ಶಿ ಸಜನ್ ಮಂದಣ್ಣ, ಪದಾಧಿಕಾರಿ ಆದರ್ಶ್ ತಮ್ಮಯ್ಯ, ಕೆ.ಪಿ. ರಕ್ಷಿತ್, ಪ್ರೇಮ್ ಸಾಗರ್, ವಿಕಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.