ಮಡಿಕೇರಿ, ಜೂ. ೨೭: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬAಧಪಟ್ಟ ತಾಲೂಕುಗಳ ಪರಿಶಿಷ್ಟ ಜಾತಿಯ ಜನಾಂಗದವರಿAದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಟ್ಯಾಬ್ ವಿತರಣೆ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಸಂಬAಧ ನಿಗದಿತ ಗುರಿಗಳಿಗೆ ತಕ್ಕಷ್ಟು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳು ಬಾರದಿರುವುದರಿಂದ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆ: ಫಲಾಪೇಕ್ಷಿಯು ೧ ಎಕರೆಯಿಂದ ೫ ಎಕರೆ ವ್ಯವಸಾಯದ ಜಮೀನು ಹೊಂದಿದ್ದು, ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದುಕೊಂಡಿರಬಾರದು. ಅಂತವರ ಜಮೀನಿನಲ್ಲಿ ಕೊಳವೆ ಬಾವಿ ಕೊರೆದು ಪಂಪ್ ಮೋಟಾರ್ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವೀರಾಜಪೇಟೆ ಕ್ಷೇತ್ರದಲ್ಲಿ ೧೩ ಕೊಳವೆ ಬಾವಿಗಳು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ವೀರಾಜಪೇಟೆ ಕ್ಷೇತ್ರದಲ್ಲಿ ೧೦ ಕೊಳವೆ ಬಾವಿಗಳು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವೀರಾಜಪೇಟೆ ಕ್ಷೇತ್ರದಲ್ಲಿ ೧ ಕೊಳವೆ ಬಾವಿ.

ಮೈಕ್ರೋ ಕ್ರೆಡಿಟ್ ಯೋಜನೆಯಡಿ ನೋಂದಾಯಿತ ಮಹಿಳಾ ಸ್ವ ಸಹಾಯ ಸಂಘಗಳಿಗೆ (೧೦ ಸದಸ್ಯರ ಸಂಘ) ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವೀರಾಜಪೇಟೆ ೧ ಸಂಘ (೧೦ ಸದಸ್ಯರ ಸಂಘ).

ಉದ್ಯಮಶೀಲತಾ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ) ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.೭೦ ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. ೨ ಲಕ್ಷ ಸಹಾಯಧನ ಉಳಿದ ಮೊತ್ತವನ್ನು ಬ್ಯಾಂಕಿನಿAದ ಸಾಲ ಪಡೆದುಕೊಳ್ಳಬೇಕು. ವೀರಾಜಪೇಟೆಯಲ್ಲಿ ೨ ಗುರಿಯನ್ನು ಹೊಂದಿದೆ.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಟ್ಯಾಬ್ ವಿತರಣೆ ಯೋಜನೆ: ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕಾವೆಂರ‍್ಸ್ ಮತ್ತು ಅವರ ಅವಲಂಬಿತರ ಮಕ್ಕಳು ೮ನೇ ತರಗತಿಯಿಂದ ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿAಗ್, ಬಿಎ, ಬಿಎಸ್ಸಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವರಿಗೆ ಆನ್‌ಲೈನ್ ಪಾಠ ಕೇಳಲು ಅನುಕೂಲವಾಗುವಂತೆ ಪ್ರತಿ ವಿದ್ಯಾರ್ಥಿಗಳಿಗೆ ಒಂದು ಟ್ಯಾಬ್ ಉಚಿತವಾಗಿ ವಿತರಿಸಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂ. ೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ತಾ. ೨೯ ಕೊನೆಯ ದಿನವಾಗಿದೆ. ಅರ್ಜಿ ಈ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಚಂದ್ರಪ್ಪ ತಿಳಿಸಿದ್ದಾರೆ.

ವೃತ್ತಿ ಮಾರ್ಗದರ್ಶನ ತರಬೇತಿಗೆ

ಭಾರತೀಯ ಸೇನೆ/ ಇತರ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ಅಭ್ಯರ್ಥಿಗಳಿಗೆ ೨೦೨೪-೨೫ ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (ಬಾಲಕರಿಗೆ ಮಾತ್ರ). ಆಸಕ್ತ ಅಭ್ಯರ್ಥಿಗಳು ಜುಲೈ ೧೦ ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-೧ ಕ್ಕೆ ರೂ. ೨.೫೦ ಲಕ್ಷ ಹಾಗೂ ಪ್ರವರ್ಗ-೨(ಎ), ೩(ಎ) ಮತ್ತು ೩(ಬಿ)ಗಳಿಗೆ ರೂ. ೧ ಲಕ್ಷ. ಅಭ್ಯರ್ಥಿಯು ೧೦ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ ೩೩ ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿ ೧೭ ರಿಂದ ೨೦ ವರ್ಷದೊಳಗಿರಬೇಕು(೧೦ ಜುಲೈ ೨೦೦೪ ರಿಂದ ಜುಲೈ ೨೦೦೭ರ ನಡುವಿನ ಅವಧಿಯಲ್ಲಿ ಜನಿಸಿರಬೇಕು). ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು.

ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಜುಲೈ ೧೦ ರೊಳಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ ೧೦ ಕೊನೆಯ ದಿನವಾಗಿದೆ (ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ, ಸಾರ್ವಜನಿಕರ ರಜಾ ದಿನಗಳನ್ನು ಹೊರತುಪಡಿಸಿ). ಸಹಾಯವಾಣಿ ದಕ್ಷಿಣ ಕನ್ನಡ ಜಿಲ್ಲೆ ದೂ. ೦೮೨೪-೨೨೨೫೦೭೮, ಉಡುಪಿ ಜಿಲ್ಲೆ ದೂ. ೦೮೨೦-೨೫೭೪೮೮೧, ಉತ್ತರ ಕನ್ನಡ ದೂ. ೦೮೩೮೨-೨೨೬೫೮೯ ಹಾಗೂ ಕೇಂದ್ರ ಕಚೇರಿ ದೂ. ೮೦೫೦೭೭೦೦೦೪ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.