ಸಿದ್ದಾಪುರ, ಜೂ. ೨೭: ನಮ್ಮ ಅರಣ್ಯ ನಮ್ಮ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಂಪ್ರಭಾವ್ ಫೌಂಡೇಷನ್, ಬಾಟಲ್ಚೇಂಜ್ ಸಂಸ್ಥೆ, ಮಾಲ್ದಾರೆ ಗ್ರಾ.ಪಂ., ಸಂಜೀವಿನಿ ಒಕ್ಕೂಟ, ಅರಣ್ಯ ಇಲಾಖೆ ಹಾಗೂ ವಿವಿಧ ಸ್ವಸಹಾಯ ಸಂಘಟನೆಗಳ ಸಹಯೋಗದೊಂದಿಗೆ ಪರಿಸರ ದಿನಾಚರಣೆ ಅಂಗವಾಗಿ ಮಾಲ್ದಾರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಮಾಲ್ದಾರೆಯಿಂದ ಮುತ್ತೂರುವರೆಗೆ ರಸ್ತೆ ಬದಿಯಲ್ಲಿನ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭ ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷೆ ಮಾಲತಿ, ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.