ಕುಶಾಲನಗರ, ಜೂ. ೨೭: ಸ್ಥಳೀಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು.

ಮುಳುಸೋಗೆಯ ಶಾಸಕರ ಕಚೇರಿಯಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಒಂದು ಗಂಟೆತನಕ ಸುತ್ತಮುತ್ತಲ ನಾಗರಿಕರು ತಮ್ಮ ಅಹವಾಲನ್ನು ತೋಡಿಕೊಂಡರು. ಕಂದಾಯ ಇಲಾಖೆಗೆ ಸಂಬAಧಿಸಿದ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಅಲ್ಲದೆ ಮಳೆ ಸಂದರ್ಭ ಉಂಟಾಗುತ್ತಿರುವ ಸಮಸ್ಯೆಗಳನ್ನು ಶಾಸಕರೊಂದಿಗೆ ಹೇಳಿಕೊಂಡು ಸಮಸ್ಯೆಗೆ ಪರಿಹಾರ ಕೋರಿಕೊಂಡರು.

ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಸುತ್ತಮುತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಸಂದರ್ಭ ಉಪಸ್ಥಿತರಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕೆಲವು ಸ್ಥಳೀಯ ಆಡಳಿತಗಳ ಪ್ರತಿನಿಧಿಗಳು ಇಲ್ಲದ ಹಿನ್ನೆಲೆಯಲ್ಲಿ ಅಧಿಕ ಪ್ರಮಾಣದ ಸಮಸ್ಯೆಗಳು ಗಮನಕ್ಕೆ ಬರುತ್ತಿದೆ. ಎಲ್ಲ ಸಮಸ್ಯೆಗಳನ್ನು ಚರ್ಚಿಸಿ ಸ್ಥಳೀಯ ಅಧಿಕಾರಿಗಳ ಮೂಲಕ ಪರಿಹಾರಕ್ಕೆ ಪ್ರಯತ್ನ ಮಾಡಲಾಗುವುದು ಎಂದರು.