ಚೆಯ್ಯಂಡಾಣೆ, ಜೂ. ೨೭: ಕಬ್ಬಿಣದ ಪೈಪ್ಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ.
ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿ ನಿರ್ಮಾಣವಾಗುತ್ತಿರುವ ಕಟ್ಟಡವೊಂದರ ಕಾಮಗಾರಿಗೆ ಕಬ್ಬಿಣದ ಪೈಪ್ಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ನಾಪೋಕ್ಲು ಪೊಲೀಸ್ ಠಾಣೆಗೆ ತೆರಳುವ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಸಂದರ್ಭ ಅಕ್ಕಪಕ್ಕದಲ್ಲಿ ಜನ ಸಂಚಾರ ಇಲ್ಲದಿದ್ದ ಕಾರಣ ಭಾರಿ ಅನಾಹುತ ತಪ್ಪಿದ್ದು, ಪಿಕ್ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಲ್ಟಿಯಾದ ಪಿಕ್ಅಪ್ ವಾಹನವನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆರವುಗೊಳಿಸಲಾಯಿತು. - ಅಶ್ರಫ್