ಮಡಿಕೇರಿ, ಜೂ. ೨೮: ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡ ಹಿನ್ನೆಲೆ ಸಾರ್ವಜನಿಕ ಆಸ್ತಿಗಳ ರಕ್ಷಣೆ ಸಲುವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭಾರಿ ಗಾತ್ರದ ಸರಕು-ಸಾಗಾಣಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಾಣಿಕೆ ವಾಹನಗಳು, ನೋಂದಣಿ ತೂಕ ೧೮,೫೦೦ ಕೆಜಿಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ವಾಹನಗಳು, ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ, ಕಂಟೈನರ್, ಲಾಂಗ್ ಚಾಸಿಸ್ ವಾಹನಗಳ
ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ
(ಮೊದಲ ಪುಟದಿಂದ) ಸಂಚಾರವನ್ನು ಜುಲೈ ೧ ರಿಂದ ೩೦ ರ ತನಕ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಅಡುಗೆ ಅನಿಲ, ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ, ಸರಕಾರಿ ಕೆಲಸ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ ಸಂಚಾರಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಕೊಡಗು ಜಿಲ್ಲೆ ಮೂಲಕ ಹಾದುಹೋಗುವ ರಾಷ್ಟಿçÃಯ ಹೆದ್ದಾರಿ ೨೭೫ರಲ್ಲಿ ಬರುವ ಕುಶಾಲನಗರ ಮತ್ತು ಸಂಪಾಜೆಯಲ್ಲಿ ಚೆಕ್ಪೋಸ್ಟ್ ನಿರ್ಮಿಸಿ ಈ ಬಗ್ಗೆ ನಿಗಾ ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.